ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ
Notification


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ಸಭಾ ಚುನಾವಣೆಯ ಘೋಷಣೆಯ ಬೆನ್ನಲ್ಲೇ ಕರ್ನಾಟಕ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂನ್ 26ರಂದು ಅವಧಿ ಪೂರ್ಣಗೊಳ್ಳಲಿರುವ ಸದಸ್ಯರ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಜೂನ್ 1ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದು, ಜೂನ್ 9ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್ 11 ಕೊನೆಯ ದಿನವಾಗಿದ್ದು, ಜೂನ್ 18ರಂದು ಮತದಾನ ಹಾಗೂ ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಳ್ಳಲಿರುವ ಸದಸ್ಯರಲ್ಲಿ ಬಿ.ಕೆ. ಹರಿಪ್ರಸಾದ್, ನಾಸೀರ್ ಅಹ್ಮದ್, ತಿಪ್ಪಣ್ಣ, ಪ್ರತಾಪ್ ಸಿಂಹ ನಾಯಕ್, ಎನ್. ನಾಗರಾಜು, ಸುನಿಲ್ ವಲ್ಯಾಪುರ ಹಾಗೂ ಗೋವಿಂದರಾಜು ಸೇರಿದ್ದಾರೆ.

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲವನ್ನು ಗಮನಿಸಿದರೆ ಕಾಂಗ್ರೆಸ್ಗೆ ಈ ಬಾರಿ ಸ್ಪಷ್ಟ ಮುನ್ನಡೆ ಸಿಗುವ ಸಾಧ್ಯತೆ ಇದೆ. 7 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಲೆಕ್ಕಾಚಾರ ಕೇಳಿಬರುತ್ತಿದ್ದು, ಬಿಜೆಪಿ 2 ಸ್ಥಾನಗಳಿಗೆ ಸೀಮಿತವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಜೆಡಿಎಸ್ ತನ್ನ ಹಾಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳೂ ಕಂಡು ಬರುತ್ತಿವೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande