ಪತ್ರಕರ್ತರ ಸಹಕಾರ ಸಂಘದ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ವಿತರಣೆ
ಪತ್ರಕರ್ತರ ಸಹಕಾರ ಸಂಘದ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ವಿತರಣೆ
ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘದ ಸದಸ್ಯರಿಗೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಯಶಸ್ವಿನಿ ಆರೋಗ್ಯ ಯೋಜನೆಯ ಕಾರ್ಡ್ ವಿತರಿಸಿದರು.


ಕೋಲಾರ, 26 ಮೇ (ಹಿ.ಸ.) :

ಆ್ಯಂಕರ್ : ಪತ್ರಕರ್ತರಿಗೆ ಸೂರು ಕಲ್ಪಿಸಲು ಅಗತ್ಯವಾದ ಜಮೀನು ನೀಡುವ ಕುರಿತು ಕ್ರಮ ಹಾಗೂ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಗೆ ಸಿಎ.ನಿವೇಶನ ಮಂಜೂರು ಮಾಡಿಸಿ, ಅದಕ್ಕೆ ಪಾವತಿಸಬೇಕಾದ ರಿಯಾಯತಿ ದರದ ಮೊಬಲಗನ್ನು ತಾವೇ ಭರಿಸುವುದಾಗಿ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಭರವಸೆ ನೀಡಿದರು.

ಜಿಲ್ಲೆಯ ಪತ್ರಕರ್ತರಿಗೆ ಸೂರು ಕಲ್ಪಿಸಲು ಜಿಲ್ಲಾ ಕೇಂದ್ರದಲ್ಲಿ ೫ ಎಕರೆ ಹಾಗೂ ತಾಲ್ಲೂಕುಗಳಲ್ಲಿ ತಲಾ ೨ ಎಕರೆ ಜಮೀನು ಮಂಜೂರು ಮಾಡಿಸಿಕೊಡಿ ಎಂದು ಕೋರಿ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದಿAದ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು.

ಪತ್ರಕರ್ತರಿಗೆ ಜಮೀನು ಮಂಜೂರು ಮಾಡಲು ಕಾನೂನಿನಲ್ಲಿ ಇರುವ ಸಾಧಕ ಬಾಧಕಗಳ ಕುರಿತು ಚರ್ಚಿಸುವುದಾಗಿಯೂ ತಿಳಿಸಿ, ಅಗತ್ಯ ಕ್ರಮದ ಭರವಸೆ ನೀಡಿದ ಶಾಸಕರು, ಸಹಕಾರ ಸಂಘದ ಕಚೇರಿಗೆ ಸಿಎ ನಿವೇಶನ ಒದಗಿಸಲು ಇಂದೇ ಕ್ರಮವಹಿಸಲಾಗುವುದು. ಸಿಎ ನಿವೇಶನ ಪಡೆಯಲು ಕೆಡಿಎ ವಿಧಿಸುವ ರಿಯಾಯತಿ ದರವನ್ನು ತಾವೇ ಸ್ವತಃ ಭರಿಸುವುದಾಗಿಯೂ ಭರವಸೆ ನೀಡಿದರು.

ಮನವಿ ಸಲ್ಲಿಸಿ ಮಾತನಾಡಿದ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಿಲ್ಲೆಯಲ್ಲಿನ ಪತ್ರಕರ್ತರಲ್ಲಿ ಶೇ. ಶೇ.೯೦ ರಷ್ಟು ಮಂದಿಗೆ ನಿಗಧಿತ ವೇತನವಿಲ್ಲ ಇಂತಹ ಸಂದರ್ಭದಲ್ಲಿ ಸ್ವಂತ ಸೂರು ಪಡೆಯಲು ಅಸಾಧ್ಯವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೋಲಾರ ಜಿಲ್ಲಾ ಕೇಂದ್ರದಲ್ಲಿ ೧೦೦ಕ್ಕೂ ಹೆಚ್ಚು ಪತ್ರಕರ್ತರಿದ್ದು, ೫ ಎಕರೆ ಜಮೀನು ಮಂಜೂರು ಮಾಡಿದಲ್ಲಿ ಎಲ್ಲಾ ಪತ್ರಕರ್ತರಿಗೂ ಸೂರು ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ ಅವರು, ಈ ಕಾರ್ಯ ಕೋಲಾರ ಜಿಲ್ಲೆಯಿಂದಲೇ ಆರಂಭವಾಗಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘಕ್ಕೆ ಕಚೇರಿ ನಿರ್ಮಾಣಕ್ಕೆ ಅಗತ್ಯವಾದ ನಿವೇಶನವನ್ನು ನಗರದಲ್ಲಿ ಅಥವಾ ನಗರಾಭಿವೃದ್ದಿ ಪ್ರಾಧಿಕಾರದ ಸಿಎ ನಿವೇಶನವನ್ನು ಮಂಜೂರು ಮಾಡಿಸಿಕೊಡಲು ಕ್ರಮವಹಿಸಿ ಎಂದು ಕೋರಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ಕುಮಾರ್,ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್ಕುಮಾರ್, ಖಜಾಂಚಿ ರಾಜೇಂದ್ರಸಿAಹ, ಉಪಾಧ್ಯಕ್ಷ ರವಿಕುಮಾರ್, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಎಚ್. ಎನ್ .ಮುರಳಿಧರ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಎ.ಸದಾನಂದ, ಸಹಕಾರ ಸಂಘದ ಕಾರ್ಯದರ್ಶಿ ಬಿ.ಎಸ್.ಗಂಗಾಧರ್ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande