ಮೇ 29 ರಂದು ಗಂಗಾವತಿ ತಾಲೂಕಾ ಮಟ್ಟದ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆ
ಗಂಗಾವತಿ, 26 ಮೇ (ಹಿ.ಸ.) : ಆ್ಯಂಕರ್ : ಗಂಗಾವತಿ ತಾಲೂಕಾ ಮಟ್ಟದ 2026-27ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮೇ 29 ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ ರ
ಮೇ 29 ರಂದು ಗಂಗಾವತಿ ತಾಲೂಕಾ ಮಟ್ಟದ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆ


ಗಂಗಾವತಿ, 26 ಮೇ (ಹಿ.ಸ.) :

ಆ್ಯಂಕರ್ : ಗಂಗಾವತಿ ತಾಲೂಕಾ ಮಟ್ಟದ 2026-27ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮೇ 29 ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸುವರು. ಸಭೆಯಲ್ಲಿ 2026-27ನೇ ಸಾಲಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಬರುವ ಇತರೆ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಗಂಗಾವತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲ್ಲೂಕಿನ ಇರಕಲಗಡ ಹೋಬಳಿಗೆ ಸಂಬಂಧಿಸಿದ 2026-27ನೇ ಸಾಲಿನ ಎಪ್ರೀಲ್-2026 ಮತ್ತು ಮೇ-2026ರ ಅಂತ್ಯದವರೆಗೆ ಸಾಧಿಸಿದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವರದಿಗಳೊಂದಿಗೆ ಕೊಪ್ಪಳ ತಾಲೂಕಾ ಮಟ್ಟದ ಅಧಿಕಾರಿಗಳು ಈ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಶಾಸಕರ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande