ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಬಲೀಕರಣ ಘಟಕಗಳು ಕಾರ್ಯನಿರ್ವಹಿಸಲಿ
ಕೊಪ್ಪಳ, 26 ಮೇ (ಹಿ.ಸ.) : ಆ್ಯಂಕರ್ : ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುವ ಸಖಿ ಒನ್ ಸ್ಟಾಪ್ ಸೆಂಟರ್ ಘಟಕ ಮತ್ತು ಎಲ್ಲಾ ಮಹಿಳಾ ಘಟಕಗಳು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಹಾಗೂ ಕಾನೂನುಗಳ ಅನುμÁ್ಠನಕ್ಕೆ ಸಂಬಂಧಿಸಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದ
Let the women's empowerment units function.


ಕೊಪ್ಪಳ, 26 ಮೇ (ಹಿ.ಸ.) :

ಆ್ಯಂಕರ್ : ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುವ ಸಖಿ ಒನ್ ಸ್ಟಾಪ್ ಸೆಂಟರ್ ಘಟಕ ಮತ್ತು ಎಲ್ಲಾ ಮಹಿಳಾ ಘಟಕಗಳು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಹಾಗೂ ಕಾನೂನುಗಳ ಅನುμÁ್ಠನಕ್ಕೆ ಸಂಬಂಧಿಸಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಿಷನ್ ಶಕ್ತಿಯು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದು ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಜಾರಿ ತರಲಾದ ಸಮಗ್ರ ಕಾರ್ಯಕ್ರಮವಾಗಿದೆ. ಮಹಿಳೆಯರನ್ನು ರಾಷ್ಟ್ರ ನಿರ್ಮಾಣದಲ್ಲಿ ಸಮಾನ ಪಾಲುದಾರರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಈ ಯೋಜನೆ ಪ್ರಮುಖ ಕಾರ್ಯಕ್ರಮಗಳಾದ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಬೇಟಿ ಬಚಾವೋ ಬೇಟಿ ಪಢಾವೋ ಹಾಗೂ ನಾರಿ ಅದಾಲತ್ ಕಾರ್ಯಕ್ರಮ ಹಾಗೂ ಶಕ್ತಿ ಸದನ, ಪಾಲನಾ ಕೇಂದ್ರಗಳು, ಮಹಿಳಾ ಸಬಲೀಕರಣ ಘಟಕ, ಸಖಿ ನಿವಾಸ್ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಈ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುμÁ್ಠನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಿಶನ್ ಶಕ್ತಿಯಡಿ ಬರುವ ಸಖಿ ಸ್ಟಾಪ್ ಸೆಂಟರ್ ಎಲ್ಲ ಸಿಬ್ಬಂದಿಯು ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಹಿಳಾ ಸಬಲೀಕರಣ ಘಟಕದಲ್ಲಿನ ಸಿಬ್ಬಂದಿಯು ತಮ್ಮ ಕಾರ್ಯಗಳೇನು ಎಂಬುದನ್ನರಿತು ಚುರುಕಾಗಿ ಕಾರ್ಯ ನಿರ್ವಹಿಸಬೇಕು. ಸಾಮಥ್ರ್ಯಾಭಿವೃದ್ಧಿ ತರಬೇತಿ ಹಾಗೂ ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಗುರಿಯನುಸಾರ ನಡೆಸಬೇಕು. ಎಲ್ಲ ಸಿಬ್ಬಂದಿಯು ತಾವು ಕೈಗೊಂಡ ಕಾರ್ಯಗಳ ಬಗ್ಗೆ ಮಾಹೆವಾರು ಛಾಯಾಚಿತ್ರಗಳ ಸಮೇತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಂತಹ ಸಿಬ್ಬಂದಿಯನ್ನು ಮುಂದುವರೆಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ ಅವರು ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಸಬಲೀಕರಣ ಘಟಕಗಳ ಎಲ್ಲ ಸಿಬ್ಬಂದಿಗೆ ಸರಿಯಾದ ತರಬೇತಿ ವ್ಯವಸ್ಥೆ ಆಗಬೇಕು. ಆಯಾ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹೆವಾರು ಪರಿಶೀಲನೆ ನಡೆಸಿ ಉತ್ತಮವಾಗಿ ಕಾರ್ಯನಿರ್ವಹಿಸಲು ಅವರಿಗೆ ಮಾರ್ಗದರ್ಶನ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅಮರೇಶ ಹಾವಿನ್ ಅವರಿಗೆ ನಿರ್ದೇಶನ ನೀಡಿದರು.

ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ದೊರೆಯುವ ಸೇವೆಗಳ ಬಗ್ಗೆ ಮತ್ತು ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಏಪ್ರೀಲ್ 2025 ರಿಂದ ಮಾರ್ಚ 2026ರವರೆಗೆ 11 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, 10 ಲೈಂಗಿಕ ಅಪರಾಧ ಪ್ರಕರಣಗಳು, 39 ಪೋಕ್ಸೊ, 2 ಬಾಲ್ಯ ವಿವಾಹ ಪ್ರಕರಣಗಳು, 19 ಕಾಣೆಯಾದ ಪ್ರಕರಣಗಳು, 3 ಇನ್ನಿತರೆ ಪ್ರಕರಣಗಳು ದಾಖಲಾಗಿವೆ. ಸಖಿ ಸ್ಟಾಪ್ ಸೆಂಟರನಲ್ಲಿ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ, ಕಾನೂನು ಸಲಹೆ ಮತ್ತು ನೆರವು, ಆಪ್ತ ಸಮಾಲೋಚನೆ, ತಾತ್ಕಾಲಿಕ ಸುರಕ್ಷಿತ ವಸತಿ ಸೌಲಭ್ಯ ಮತ್ತು ಪೊಲೀಸ್ ನೆರವು ನೀಡಲಾಗುತ್ತಿದೆ ಎಂದು ಸಖಿ ಸ್ಟಾಪ್ ಸೆಂಟರನ ಅಧಿಕಾರಿ ಯಮುನಾ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೋಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಅನ್ನಪೂರ್ಣ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande