ಎಸ್.ಎನ್.ಆರ್ ಆಸ್ಪತ್ರಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ
ಎಸ್.ಎನ್.ಆರ್ ಆಸ್ಪತ್ರಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ
ಕೋಲಾರ ಎಸ್.ಎನ್.ಆರ್. ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಕೊತ್ತೂರು ಮಂಜುನಾಥ್ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು.


ಕೋಲಾರ, ಮೇ ೨೬ (ಹಿ.ಸ) :

ಆ್ಯಂಕರ್ : ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಸುಧಾರಣಾ ಸಮಿತಿ ಸಭೆಗೆ ಆಗಮಿಸಿದ ಶಾಸಕ ಕೊತ್ತೂರು ಮಂಜುನಾಥ್ ಅವರು, ಆಸ್ಪತ್ರೆಯ ರೋಗಿಗಳ ಸಮಸ್ಯೆಗಳನ್ನು ಆಲಿಸಿ ಹಾಗೂ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಆರೋಗ್ಯ ಸುಧಾರಣಾ ಸಮಿತಿ ಸಭೆಯ ನಂತರ ಆಸ್ಪತ್ರೆಯ ವಿವಿಧೆಡೆ ಖುದ್ದಾಗಿ ತೆರಳಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಕುಟುಂಬಸ್ಥರೊ0ದಿಗೆ ನೇರವಾಗಿ ಭೇಟಿ ಮಾಡಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಚಿಕಿತ್ಸೆ, ಉಚಿತ ಔಷಧಿಗಳ ಲಭ್ಯತೆ ಮತ್ತು ವೈದ್ಯರ ಸ್ಪಂದನೆಯ ಬಗ್ಗೆ ಮಾಹಿತಿ ಪಡೆದರು.

ರೋಗಿಗಳು ಧೃತಿಗೆಡಬೇಡಿ, ಆಸ್ಪತ್ರೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ಪ್ರತಿಯೊಂದು ಸಮಸ್ಯೆಯನ್ನೂ ತಕ್ಷಣವೇ ಸರಿಪಡಿಸಿ ಬಡ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವಂತೆ ಮಾಡಲಾಗುವುದು ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಕೆಲಸಗಳನ್ನು ನಿರ್ವಹಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ವೀಕ್ಷಣೆ ನಡೆಸಿದರು. ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಂಡು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಸರ್ಕಾರದಿಂದ ಸಿಗುವ ಉಚಿತ ಔಷಧಿ ಹಾಗೂ ಸೌಲಭ್ಯಗಳು ಪ್ರತಿಯೊಬ್ಬ ಬಡ ರೋಗಿಗೂ ತಲುಪಬೇಕು. ಚಿಕಿತ್ಸೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ವೈದ್ಯಕೀಯ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್, ಆರೋಗ್ಯ ಸುಧಾರಣಾ ಸಮಿತಿ ಸದಸ್ಯರು, ವೈದ್ಯಾಧಿಕಾರಿಗಳು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಚಿನ್ನಾಪುರ ನಾರಾಯಣಸ್ವಾಮಿ, ವೀರೇಂದ್ರ ಪಾಟೀಲ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande