ಸಾರ್ವಜನಿಕರ ಅಹವಾಲು ಆಲಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ, 26 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಲೋಕ ಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಕುರಿತು ಮನವಿಗಳನ್ನು ಸ್ವೀಕರಿಸಿದರು
ಜನತಾ ದರ್ಶನ


ದಾವಣಗೆರೆ, 26 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಲೋಕ ಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಕುರಿತು ಮನವಿಗಳನ್ನು ಸ್ವೀಕರಿಸಿದರು.

ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯ ಜಗಳೂರು, ಅಸಗೋಡು, ಹರಿಹರ, ಕೊಂಡಜ್ಜಿ, ಕುರುಬರಹಳ್ಳಿ, ಹೆಬ್ಬಾಳು, ಐಗೂರು, ಚನ್ನಗಿರಿ ಹಾಗೂ ದಾವಣಗೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಂದ ಸಾರ್ವಜನಿಕರು ನಿವೇಶನ ಸಮಸ್ಯೆ, ಚರಂಡಿ ವ್ಯವಸ್ಥೆ, ಬಸ್ ನಿಲ್ದಾಣ ಅಭಿವೃದ್ಧಿ, ದೇವಸ್ಥಾನಗಳಿಗೆ ಅನುದಾನ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಪ್ರತೀ ಮಂಗಳವಾರ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರ ಬೇಡಿಕೆಗಳು, ಸಲಹೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಆಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದೆ ತಿಳಿಸಿದರು.

ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande