ಸೇಡಂ ನಗರಾಭಿವೃದ್ಧಿಗೆ ₹2 ಕೋಟಿ ಕಾಮಗಾರಿಗೆ ಸಚಿವ ಶರಣಪ್ರಕಾಶ ಪಾಟೀಲ ಚಾಲನೆ
ಸೇಡಂ, 26 ಮೇ (ಹಿ.ಸ.) : ಆ್ಯಂಕರ್ : 2024-25ನೇ ಸಾಲಿನ ನಗರೋತ್ಥಾನ ಹಂತ-4 ಪ್ರೋತ್ಸಾಹಧನ ಯೋಜನೆಯಡಿ ಸೇಡಂ ನಗರದ ವಿವಿಧ ವಾರ್ಡ್ಗಳಲ್ಲಿ ರಸ್ತೆ, ಚರಂಡಿ ಹಾಗೂ ನೀರು ಶುದ್ಧೀಕರಣ ಘಟಕಗಳ ನಿರ್ಮಾಣಕ್ಕಾಗಿ ಅಂದಾಜು ₹2 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವ ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.
ಪಾಟೀಲ


ಸೇಡಂ, 26 ಮೇ (ಹಿ.ಸ.) :

ಆ್ಯಂಕರ್ : 2024-25ನೇ ಸಾಲಿನ ನಗರೋತ್ಥಾನ ಹಂತ-4 ಪ್ರೋತ್ಸಾಹಧನ ಯೋಜನೆಯಡಿ ಸೇಡಂ ನಗರದ ವಿವಿಧ ವಾರ್ಡ್ಗಳಲ್ಲಿ ರಸ್ತೆ, ಚರಂಡಿ ಹಾಗೂ ನೀರು ಶುದ್ಧೀಕರಣ ಘಟಕಗಳ ನಿರ್ಮಾಣಕ್ಕಾಗಿ ಅಂದಾಜು ₹2 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವ ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸೇಡಂ ಪಟ್ಟಣವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದ್ದು, ಜನಸಂಖ್ಯೆ ಹಾಗೂ ಮೂಲಸೌಕರ್ಯಗಳ ಅಗತ್ಯತೆ ಗಮನದಲ್ಲಿಟ್ಟುಕೊಂಡು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.

ಸೇಡಂ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮುಖ್ಯವಾಗಿ ರಸ್ತೆ ಅಭಿವೃದ್ಧಿ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ತಮ್ಮ ಅವಧಿಯಲ್ಲಿ ಸೇಡಂ ಪಟ್ಟಣದ ಚಿತ್ರಣವೇ ಬದಲಾಗುತ್ತಿದೆ ಎಂದು ಹೇಳಿದ ಸಚಿವರು, ನಗರದ ಕೋಡ್ಲಾ ಕ್ರಾಸ್ನಿಂದ ಬಸವೇಶ್ವರ ವೃತ್ತದವರೆಗೆ ಚತುಸ್ಪಥ ರಸ್ತೆ ನಿರ್ಮಾಣ, ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆವರೆಗಿನ ರಸ್ತೆ ಸುಧಾರಣೆ ಕಾರ್ಯಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.

ಮುಂದಿನ ಎರಡು ವರ್ಷಗಳಲ್ಲಿ ಸೇಡಂ ಪಟ್ಟಣವನ್ನು ಸುಸಜ್ಜಿತ ಹಾಗೂ ಆಧುನಿಕ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಇನ್ನೂ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande