ಮೇ 31ರಂದು ಕೊಪ್ಪಳದಲ್ಲಿ ಈಜು ಸ್ಪರ್ಧೆ
ಕೊಪ್ಪಳ, 26 ಮೇ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಸ್ವೀಮಿಂಗ್ ಕ್ಲಬ್ ಇವರ ಸಹಯೋಗದೊಂದಿಗೆ ಈಜು ಸ್ಪರ್ಧೆಯನ್ನು ಮೇ 31 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಈಜುಕೊಳದಲ್ಲಿ ಹಮ್ಮಿಕೊಳ್ಳಲ
ಮೇ 31ರಂದು ಕೊಪ್ಪಳದಲ್ಲಿ ಈಜು ಸ್ಪರ್ಧೆ


ಕೊಪ್ಪಳ, 26 ಮೇ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಸ್ವೀಮಿಂಗ್ ಕ್ಲಬ್ ಇವರ ಸಹಯೋಗದೊಂದಿಗೆ ಈಜು ಸ್ಪರ್ಧೆಯನ್ನು ಮೇ 31 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಈಜುಕೊಳದಲ್ಲಿ ಹಮ್ಮಿಕೊಳ್ಳಲಾಗಿದೆ.

ಈಜು ಸ್ಪರ್ಧೆಯಲ್ಲಿ 8 ರಿಂದ 10 ವರ್ಷ ವಯೋಮಿತಿ, 10 ರಿಂದ 12 ವರ್ಷ ವಯೋಮಿತಿ ಹಾಗೂ 12 ರಿಂದ 14ವರ್ಷ ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕೀಯರಿಗೆ ಅವಕಾಶವಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಈಜು ಸಮವಸ್ತ್ರ (ಸ್ವೀಮ್ ಸೂಟ್) ಹಾಗೂ ಸ್ವೀಮ್ ಗಾಗಲ್ ಮತ್ತು ಹೆಡ್ಕ್ಯಾಪ್ ಕಡ್ಡಾಯವಾಗಿದೆ. ಇದಲ್ಲದೇ ಎರಡು ಭಾವಚಿತ್ರ ಮತ್ತು ಆಧಾರ ಕಾರ್ಡ ಝರಾಕ್ಷ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಮೇ 30ರ ಒಳಗಾಗಿ ಕಡ್ಡಾಯವಾಗಿ ನೊಂದಣಿ ಮಾಡಿಸಬೇಕು.

ಈ ಈಜು ಸ್ಪರ್ಧೆ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಈಜುವ ವಿಧಾನ ಫ್ರಿ ಸ್ಟೈಲ್ ವಿಜೇತರಿಗೆ ಸೂಕ್ತ ಬಹುಮಾನ ನೀಡಲಾಗುವುದು.

ಈಜು ಸ್ಪರ್ಧೆ ಆಸಕ್ತರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ ಕೊಪ್ಪಳ ಕಛೇರಿಗೆ ಭೇಟಿ ನೀಡಬಹುದಾಗಿದೆ ಹಾಗೂ ಮೊ.ಸಂ: 8301802801 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08539-230121 ಗೆ ಸಂಪರ್ಕಿಸಬಹುದು.

ಜಿಲ್ಲೆಯ ಸಾರ್ವಜನಿಕರು ಈಜು ಸ್ಪರ್ಧೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande