
ಕೊಪ್ಪಳ, 26 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಜೂನ್ 2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳದ ಪ್ರತಿಷ್ಠಿತ ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ಐ.ಟಿ.ಐ ಫಿಟ್ಟರ್, ಐ.ಟಿ.ಐ ವೆಲ್ಡರ್, ಐ.ಟಿ.ಐ ಮೆಕ್ಯಾನಿಕ್, ಐ.ಟಿ.ಐ ಇಲೆಕ್ಟ್ರಿಷಿಯನ್ ಅಥವಾ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಇತರೆ ಪದವಿ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತ 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೆÇೀರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಉದ್ಯೋಕಾಂಕ್ಷಿಗಳು https://forms.gle/uJnyp39f6SRzKqhKA ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್