
ಗದಗ, 27 ಮೇ (ಹಿ.ಸ.) :
ಆ್ಯಂಕರ್ : 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಆಶ್ರಮ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶಿರಹಟ್ಟಿ ತಾಲೂಕಿನ ನವೇಭಾವನೂರಿನ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಸಂಖ್ಯಾಬಲಕ್ಕನುಗುಣವಾಗಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
1 ರಿಂದ 5ನೇ ತರಗತಿಯವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಪಿ.ಯು.ಸಿ., ಡಿ.ಎಡ್ ಹಾಗೂ ಟಿಇಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 6 ರಿಂದ 7ನೇ ತರಗತಿಯವರೆಗೆ ಪದವಿಧರ ಶಿಕ್ಷಕರ ಹುದ್ದೆಗಳಿಗೆ ಬಿ.ಎ., ಡಿ.ಎಡ್ ಅಥವಾ ಬಿ.ಎಸ್ಸಿ., ಡಿ.ಎಡ್ ಹಾಗೂ ಟಿಇಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಸೂಚನೆಯಂತೆ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜೂನ್ 1, 2026 ರಿಂದ ಏಪ್ರಿಲ್ 10, 2027ರವರೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಕಚೇರಿ ವೇಳೆಯಲ್ಲಿ ಶಿರಹಟ್ಟಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯದಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 2 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 08487-295097 ಹಾಗೂ 9480843132 ದೂರವಾಣಿ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿರಹಟ್ಟಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP