ಬಳ್ಳಾರಿ ಜಿಲ್ಲಾದ್ಯಂತ ಗೋವು, ಒಂಟೆಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ನಿಷೇಧ
ಬಳ್ಳಾರಿ, 27 ಮೇ (ಹಿ.ಸ.) : ಆ್ಯಂಕರ್ : ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ದೇಶದಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತವು ತಿಳಿಸಿದೆ. ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ
ಬಳ್ಳಾರಿ ಜಿಲ್ಲಾದ್ಯಂತ ಗೋವು, ಒಂಟೆಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ನಿಷೇಧ


ಬಳ್ಳಾರಿ, 27 ಮೇ (ಹಿ.ಸ.) :

ಆ್ಯಂಕರ್ : ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ದೇಶದಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತವು ತಿಳಿಸಿದೆ.

ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್ಪೆÇೀಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೆÇಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.

ಸಾರ್ವಜನಿಕರಲ್ಲಿ ಮನವಿ ಮತ್ತು ಸಹಾಯವಾಣಿ :

ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದು ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣವೇ ಪಶುಸಂಗೋಪನಾ ಇಲಾಖೆ- 08392-275146, ಪೆÇಲೀಸ್ ಇಲಾಖೆ (ತುರ್ತು ಸಂಖ್ಯೆ) 112 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಿಯಮಗಳ ಪಾಲನೆಗಾಗಿ ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande