ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ : ವಿಜಯೇಂದ್ರ ಭವಿಷ್ಯ
ಶಿವಮೊಗ್ಗ, 27 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಬದಲಿಸಿ ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ
Byv


ಶಿವಮೊಗ್ಗ, 27 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಬದಲಿಸಿ ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕವಾಗಿದ್ದು, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಅನಿವಾರ್ಯವಾಗಲಿದೆ ಎಂದು ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, “ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಿದೆ. ಮುಖ್ಯಮಂತ್ರಿಗಳ ಬದಲಾವಣೆ ಕುರಿತು ದೆಹಲಿಯಲ್ಲಿ ಐದು ಗಂಟೆಗಳ ಮ್ಯಾರಥಾನ್ ಸಭೆ ನಡೆದಿದ್ದು, ಅದರ ಅಂತ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಆರೋಪಿಸಿದರು.

ರಾಜ್ಯ ಸರ್ಕಾರದಲ್ಲಿ ಆಂತರಿಕ ಕಲಹ ಹೆಚ್ಚಾಗಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಸುಲಭವಾಗುವುದಿಲ್ಲ ಎಂದು ಹೇಳಿದ ಅವರು, “ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ದೇಶದಾದ್ಯಂತ ಕಾಂಗ್ರೆಸ್ ಅವನತಿಯ ಮುನ್ಸೂಚನೆ” ಎಂದರು.

ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ರಾಜ್ಯದ ಸಾಲದ ಮೊತ್ತ ಹತ್ತು ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಆಡಳಿತ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು.

“ವಾಲ್ಮೀಕಿ ನಿಗಮ, ಮೂಡಾ ಸೇರಿದಂತೆ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿವೆ. ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕವಾಗಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ನಿಂತಿದ್ದು, ಭ್ರಷ್ಟಾಚಾರದಲ್ಲಿ ಮುಳುಗಿದ ಸರ್ಕಾರದ ಪತನ ಖಚಿತ ಎಂದು ಅಭಿಪ್ರಾಯಪಟ್ಟ ಅವರು, ಬಿಜೆಪಿ ಸಂಘಟನೆ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande