ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು
ಕೊಪ್ಪಳ, 27 ಮೇ (ಹಿ.ಸ.) : ಆ್ಯಂಕರ್ : ರೈತರ ಬೇಡಿಕೆಯಂತೆ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇರುವುದಿಲ್ಲವೆಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಏಪ
ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು


ಕೊಪ್ಪಳ, 27 ಮೇ (ಹಿ.ಸ.) :

ಆ್ಯಂಕರ್ : ರೈತರ ಬೇಡಿಕೆಯಂತೆ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇರುವುದಿಲ್ಲವೆಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಏಪ್ರೀಲ್ ನಿಂದ ಮೇ ವರೆಗೆ ರಸಗೊಬ್ಬರ ಬೇಡಿಕೆಯು 33,187 ಟನ್ ಯಿದ್ದು, 43,282 ಟನ್ ರಸಗೊಬ್ಬರ ದಾಸ್ತಾನಿಕರಿಸಿದ್ದು (Opening Balance ಸೇರಿ), 10,032 ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಬಾಕಿ ಉಳಿದಿರುವ ದಾಸ್ತಾನು 33,250 ಟನ್ ರಸಗೊಬ್ಬರ ವಿದ್ದು, ಇದರಲ್ಲಿ ಯೂರಿಯಾ 11,004 ಟನ್, ಡಿಎಪಿ 5002 ಟನ್, ಎಂಓಪಿ 1092 ಟನ್, ಕಾಂಪ್ಲೆಕ್ಸ್ 15,740 ಟನ್, ಎಸ್.ಎಸ್.ಪಿ 412 ಟನ್ ಮತ್ತು ಇದರ ಜೊತೆಗೆ 13,520 ಲೀಟರ್ ನ್ಯಾನೋ ಯೂರಿಯಾ, 1825 ಲೀಟರ್ ನ್ಯಾನೋ ಡಿಎಪಿ ಕೃಷಿ ಪರಿಕರ ಮಾರಾಟಗಾರ ಮಳಿಗೆಗಳಲ್ಲಿ ಲಭ್ಯವಿದ್ದು, ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ.

ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಸ್ಪ್ರೇ ಮಾಡುವುದರಿಂದ ಗಿಡಗಳಿಗೆ ನೇರವಾಗಿ ಪೋಷಕಾಂಶ ದೊರೆಯುವುದದರಿಂದ ನೀರು ಹಾಗೂ ಮಣ್ಣನ್ನು ಸಂರಕ್ಷೀಸಬಹುದು.

ಕೊಪ್ಪಳ ಜಿಲ್ಲೆಯ ನಾನಾ ಗೋದಾಮುಗಳಿಗೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಯೂರಿಯಾ ದಾಸ್ತಾನು ಪರಿಶೀಲನೆ ನಡೆಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಫ್ರೂಟ್ ಐಡಿ (ಎಫ್.ಐಡಿ) ಸಂಖ್ಯೆ ಕಡ್ಡಾಯಗೊಳಿಸಲಾಗಿದೆ.

ರೈತರ ಎಫ್.ಐಡಿ ಸಂಖ್ಯೆ ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಪೂರ್ಣ ಪ್ರಕ್ರಿಯೆಯು ಕೆ-ಕಿಸಾನ್ ಯೂರಿಯಾ ವಿತರಣೆ ತಂತ್ರಾಂಶದ ಮೂಲಕವೇ ನಡೆಯಲಿದೆ.

ರೈತರಲ್ಲದವರು ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಆಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವುದು, ರೈತರು ಮಿತವಾಗಿ ಗೊಬ್ಬರ ಬಳಸುವಂತೆ ಮಾಡುವುದು ಹಾಗೂ ಮಾರಾಟದ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ.

ಎಫ್.ಐಡಿ ಹೊಂದಿಲ್ಲದ ರೈತರು ತಕ್ಷಣವೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಎಫ್.ಐಡಿ ಸೃಜಿಸಿಕೊಳ್ಳಬೇಕು. ಈಗಾಗಲೇ ಎಫ್.ಐಡಿ ಹೊಂದಿರುವ ರೈತರು ತಮ್ಮ ಎಲ್ಲ ಸರ್ವೇ ನಂಬರ್ ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶವಿದೆ.

ಇದರಿಂದ ತಮ್ಮ ಎಲ್ಲಾ ಜಮೀನುಗಳಿಗೆ ರಸಗೊಬ್ಬರ ಪಡೆಯಬಹುದಾಗಿದೆ.

ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ ಐಡಿ ನಮೂದಿಸಿ ಯೂರಿಯಾ ಮಾರಾಟ ಮಾಡಬೇಕು. ಒಂದು ವೇಳೆ 'ಓ' ಫಾರಂ ನವೀಕರಿಸದೆ ಮಾರಾಟ ಮಾಡಿದರೆ, ನಿಗದಿಪಡಿಸಿದ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಿದರೆ ಅಥವಾ ಕೃಷಿ ಯೇತರ ಉದ್ದೇಶಗಳಿಗೆ ಯೂರಿಯಾ ಸರಬರಾಜು ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ರಸಗೊಬ್ಬರ ನಿಯಂತ್ರಣ ಕಾಯ್ದೆ 1985 ಮತ್ತು ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande