ಚಿತ್ರದುರ್ಗದ ಬಳಿ ಭೀಕರ ರಸ್ತೆ ಅಪಘಾತ ; ಒಂದೇ ಕುಟುಂಬದ ಐವರ ಸಾವು
ಚಿತ್ರದುರ್ಗ, 27 ಮೇ (ಹಿ.ಸ.) : ಆ್ಯಂಕರ್ : ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೧೫೦A ನಲ್ಲಿ ಇಂದು ಸಂಜೆ ಸಂಭವ
Accident


ಚಿತ್ರದುರ್ಗ, 27 ಮೇ (ಹಿ.ಸ.) :

ಆ್ಯಂಕರ್ : ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೧೫೦A ನಲ್ಲಿ ಇಂದು ಸಂಜೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೊಲೆರೋ ವಾಹನ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಬೊಲೆರೊ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು ಬಳ್ಳಾರಿ ಮೂಲದ ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4) ಹಾಗೂ ಪರುಶುರಾಮ (1.5) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಕೆಲವರನ್ನು ತಕ್ಷಣವೇ ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande