
ಧಾರವಾಡ, 27 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೇಂದ್ರ ಕಚೇರಿಯಿಂದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಪ್ರಯುಕ್ತ ಮಕ್ಕಳು ರಚಿಸಿದ ಪ್ರಕಟಣೆಗೊಂಡ ಪುಸ್ತಕಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಮಕ್ಕಳು ಅಕಾಡೆಮಿ ಕೇಂದ್ರ ಕಚೇರಿಗೆ ಸ್ವವಿವರಗಳನ್ನೊಳಗೊಂಡ ಪುಸ್ತಕವನ್ನು ಜೂನ್ 10, 2026 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿಲಕಮನಹಳ್ಳಿ ಧಾರವಾಡ ಕೇಂದ್ರ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.