ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಾರ್ಯಾಗಾರ
ಸಮಗ್ರ ಮತದಾರರ ವಿಶೇಷ ಪರಿಷ್ಕರಣೆಯ ಬಗ್ಗೆ ಜೆಡಿಎಸ್ನಿಂದ ಕರ್ಯಾಗಾರ ಪೂರ್ಣ
ಕೋಲಾರದಲ್ಲಿ ನಡೆದ ಜೆಡಿಎಸ್ ಕರ್ಯರ್ತರ ಸಭೆಯಲ್ಲಿ ಸಮಗ್ರ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ರ್ಚಿಸಲಾಯಿತು.


ಕೋಲಾರ, ಮೇ ೨೭ (ಹಿ.ಸ) :

ಆ್ಯಂಕರ್ : ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಪಕ್ಷ ತಳಮಟ್ಟದಿಂದ ಸಂಘಟನೆ ಮಾಡಲು ಪಕ್ಷದ ವರಿಷ್ಠರ ಆದೇಶದಂತೆ ಕಾರ್ಯಕರ್ತರಿಗೆ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜೆಡಿಎಸ್ ಎಂಎಲ್ಸಿ ಇಂಚರ ಗೋವಿಂದರಾಜು ಹೇಳಿದರು.

ನಗರದ ಪಿಸಿ ಬಡಾವಣೆಯ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರ ಗೃಹ ಕಚೇರಿಯಲ್ಲಿ ಪ್ರದೇಶ ಜಾತ್ಯತೀತ ಜನತಾ ದಳದಿಂದ ಕೋಲಾರ ತಾಲೂಕು ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಬಿಎಲ್ಎಗಳಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸಹ ಸಮಗ್ರ ವಿಶೇಷ ಪರಿಷ್ಕರಣೆ ಕಾರ್ಯಗಾರವನ್ನು ಪಕ್ಷದ ಕಾರ್ಯಕರ್ತರು ಸದುಪಯೋಗಪಡಿಸಿಕೊಳ್ಳುವ ಮೂಲಕ ಬೂತ್ ಮಟ್ಟದಲ್ಲಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಪಕ್ಷದ ವರಿಷ್ಠರ ಆದೇಶದಂತೆ ಕಾರ್ಯಕರ್ತರಿಗೆ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್ ) ಕಾರ್ಯಾಗಾರದ ಬಗ್ಗೆ ಮಾಹಿತಿಯೂ ರವಾನೆ ಆಗುತ್ತದೆ. ಈ ನಿಟ್ಟಿನಲ್ಲಿ ಸಮಗ್ರ ವಿಶೇಷ ಪರಿಷ್ಕರಣೆಯನ್ನು ಶ್ರದ್ಧೆಯಿಂದ ಪಕ್ಷದ ಬಿಎಲ್ಎಗಳು ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ಜತೆಗೆ ಶೇ. ನೂರರಷ್ಟು ನೈಜ ಮತದಾರರ ಮಾಹಿತಿ ಪಟ್ಟಿಯೊಂದಿಗೆ ಸಿಗುತ್ತದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಹೆಚ್ಚು ಸಹಕಾರಿಯಾಗುತ್ತದೆ. ಜೆಡಿಎಸ್ ಪಕ್ಷದ ಭದ್ರ ಬುನಾದಿ ಎಂದರೆ ಬೂತ್ ಮಟ್ಟದ ಕಾರ್ಯಕರ್ತರಾಗಿದ್ದು, ಮುಂಬರುವ ದಿನಗಳಲ್ಲಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕಾರ್ಯಕರ್ತರು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಜಾಗೃತರಾಗಿಬೇಕು ಎಂದರು.

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಸಮಗ್ರ ಮತದಾರರ ಪರಿಷ್ಕರಣೆ(ಎಸ್ಐಆರ್)ಅನ್ನು ಪಕ್ಷದ ಬಿಎಲ್ಎಗಳು ಗ್ರಾಮ ಬೂತನ್ನು ಮೊದಲು ಗೆಲ್ಲುವ ಹಂತದ ಮೂಲಕ ಮುಂದೆ ಜೆಡಿಎಸ್ ಪಕ್ಷ ಗೆದ್ದಂತೆ, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಶ್ರಮ ಬಹುಮುಖ್ಯ ಪಾತ್ರ ವಹಿಸುತ್ತದೆ. ಜೆಡಿಎಸ್ ಪಕ್ಷದ ಕಾರ್ಯಕರ್ತರಾಗುವ ಬಿಎಲ್ಎಗಳಿಗೆ ಸಮಗ್ರ ಮತದಾರರ ಪರಿಷ್ಕರಣೆ ಮಾಡಲು ಪಕ್ಷದ ಗುರುತಿನ ಚೀಟಿಗಳನ್ನು ನೀಡಲಾಗುತ್ತಿದ್ದು ಎಂದರು. ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಬಿಎಲ್ಎಗಳು ಜೆಡಿಎಸ್ ಪಕ್ಷದ ಸಭೆ, ಹೋರಾಟ, ಸಂಘಟನೆಗೆ ಬೂತ್ ಗೆಳಲ್ಲಿ ಪ್ರತಿನಿತ್ಯ ಒಂದು ಗಂಟೆಯ ಅವಧಿಯನ್ನು ಮೀಸಲಿಟ್ಟರೆ ಹೆಚ್ಚು ಅನುಕೂಲ ಪಕ್ಷಕ್ಕೆ ಆಗುತ್ತದೆ ಎಂದು ಹೇಳಿದರು.

ಸಮಗ್ರ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ತರಬೇತುದಾರರಾದ ಅಶ್ವಿನ್ ಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಳೆದ ಆರು ತಿಂಗಳಿನಿಂದ ಸಮಗ್ರ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಕೆಲಸವನ್ನು ಮಾಡಲಾಗುತ್ತಿದೆ ಎಂದರಲ್ಲದೆ, ಮುಂಬರುವ ಚುನಾವಣೆಗೆ ಶೇ.೫೦ ಚುನಾವಣಾ ಕಾರ್ಯವನ್ನು ಸಹ ಪೂರ್ಣಗೊಳಿಸಲಾಗಿದೆ. ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಜೋಶ್ ಹೆಚ್ಚಾಗಿದ್ದು, ಮುಂದಿನ ಚುನಾವಣೆಯಲ್ಲಿ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು. ದೇಶದಿಂದ ಮತ್ತೊಂದು ದೇಶಕ್ಕೆ ವಲಸೆ ಬಂದು, ಅಕ್ರಮ ಮತದಾರರ ಪಟ್ಟಿಯಲ್ಲಿ ಹೆಸರನ್ನು ತೆಗೆಯಲು ಸಮಗ್ರ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಜೆಡಿಎಸ್ ಮುಖಂಡ ಎಲ್.ಜಿ ಲಕ್ಷ್ಮಣ್ ಗೌಡ ಮಾತನಾಡಿ, ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಿಎಂಆರ್ ಶ್ರೀನಾಥ್ ಅವರ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸಿಕೊಂಡು, ಎಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲು ಸಂಘಟನೆಗೆ ಮೊದಲ ಆದ್ಯತೆಯನ್ನಾಗಿ ಮಾಡಿಕೊಳೋಣ ಎಂದರು.

ಕಾರ್ಯಾಗಾರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬುಮೌನಿ, ಜೆಡಿಎಸ್ ಪಕ್ಷದ ಮುಖಂಡರಾದ ವಕ್ಕಲೇರಿ ರಾಮು, ಬಣಕನಹಳ್ಳಿ ನಟರಾಜ್, ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ಸದಸ್ಯ ಲೋಕೇಶ್ ಮರಿಯಪ್ಪ, ಕುರಗಲ್ ಗಿರೀಶ್, ಜೆಸಿಬಿ ರವಿ, ಬಿಎಲ್ ಎ೧ ಹೊಳೇರಹಳ್ಳಿ ಅಶೋಕ್, ಮೂರಾಂಡಹಳ್ಳಿ ನರೇಶ್ ಬಾಬು, ಮುಖಂಡರಾದ ಚನ್ನಸಂದ್ರ ಲೋಕೇಶ್, ಕುಮಾರ್ ಮುಖಂಡರು, ಪದಾಧಿಕಾರಿಗಳು, ಬೂತ್ ಏಜೆಂಟರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande