ಕೆಳಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮಹೇಶ್ವರ್ ರಾವ್ ಸೂಚನೆ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಸಮೀಪದ ವಿಂಡ್ ಟನಲ್ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಮುಖ್ಯ ಆಯುಕ್ತ ಮಹೇಶ್ವರ ರಾವ್ ಇಂದು ಸ್ಥಳಕ್ಕೆ ಭೇಟಿ ನ
Inspection


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಸಮೀಪದ ವಿಂಡ್ ಟನಲ್ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಮುಖ್ಯ ಆಯುಕ್ತ ಮಹೇಶ್ವರ ರಾವ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಜಲಮಂಡಳಿ ಪೈಪ್ಲೈನ್, ಒಳಚರಂಡಿ ವ್ಯವಸ್ಥೆ, ಬೆಸ್ಕಾಂ ಹಾಗೂ ಆಪ್ಟಿಕಲ್ ಫೈಬರ್ ಕೇಬಲ್ಗಳ ಸ್ಥಳಾಂತರ ಕಾರ್ಯ ಪ್ರಗತಿಯಲ್ಲಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಎಲ್ಲ ಯುಟಿಲಿಟಿ ಸ್ಥಳಾಂತರ ಕಾಮಗಾರಿಗಳನ್ನು 10 ದಿನಗಳೊಳಗೆ ಪೂರ್ಣಗೊಳಿಸಿ, ಬಳಿಕ ರಿಟೈನಿಂಗ್ ವಾಲ್ ನಿರ್ಮಾಣ ಕಾರ್ಯ ಆರಂಭಿಸುವಂತೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು.

ಕಾಮಗಾರಿ ನಡೆಯುವ ಅವಧಿಯಲ್ಲಿ ವಾಹನ ಸಂಚಾರ ದಟ್ಟಣೆ ತಪ್ಪಿಸಲು ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಿದ ಅವರು, ಸಾರ್ವಜನಿಕರ ಸುರಕ್ಷತೆಯನ್ನು ಅತ್ಯಂತ ಪ್ರಾಮುಖ್ಯತೆಯಿಂದ ಪರಿಗಣಿಸಿ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

₹19 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 300 ಮೀಟರ್ ಉದ್ದದ ಆರು ಪಥಗಳ ಕೆಳಸೇತುವೆ ಕಾಮಗಾರಿಯಲ್ಲಿ ಈಗಾಗಲೇ ಶೇ.70ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಕಾರ್ಯಪಾಲಕ ಅಭಿಯಂತರರು ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande