
ಬಳ್ಳಾರಿ, 27 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ರೂಪನಗುಡಿ ರಸ್ತೆಯ ಹನುಮಾನ್ ನಗರದ ರಾಘವೇಂದ್ರ ಪಾಟೀಲ್ (43) ಫೆ.28 ರಂದು ದೊಡ್ಡಬಳ್ಳಾಪುರಕ್ಕೆ ಕೆಲಸ ಮಾಡಲು ಹೋಗಿ, ಹಿಂದಿರುಗಿರುವುದಿಲ್ಲ ಎಂದು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರು ಎತ್ತರ 5.6 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಬಿಳಿ, ನೀಲಿ, ಕಪ್ಪು ಬಣ್ಣದ ಟೀ-ಶರ್ಟ್, ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಇಂಗ್ಲೀಷ್, ಮತ್ತು ತೆಲುಗು ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್