
ನವದೆಹಲಿ, 27 ಮೇ (ಹಿ.ಸ.) :
ಆ್ಯಂಕರ್ : ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ನಮನ ಸಲ್ಲಿಸಿದರು.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಅವರ ಪುಣ್ಯತಿಥಿಯಂದು ಗೌರವ ನಮನಗಳು” ಎಂದು ತಿಳಿಸಿದ್ದಾರೆ.
1889ರ ನವೆಂಬರ್ 14ರಂದು ಅಲಹಾಬಾದ್ ನಲ್ಲಿ (ಈಗಿನ ಪ್ರಯಾಗ್ರಾಜ್) ಜನಿಸಿದ ಜವಾಹರಲಾಲ್ ನೆಹರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಸ್ವಾತಂತ್ರ್ಯಾನಂತರ 1947ರ ಆಗಸ್ಟ್ 15ರಿಂದ 1964ರ ಮೇ 27ರವರೆಗೆ ನಿರಂತರವಾಗಿ 16 ವರ್ಷ 286 ದಿನ ದೇಶದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ನೆಹರು ಅವರು ಆಧುನಿಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಕೊಡುಗೆ ನೀಡಿದ ನಾಯಕರಾಗಿ ಪರಿಗಣಿಸಲ್ಪಟ್ಟಿದ್ದಾರೆ. ಅವರ ಪ್ರಮುಖ ಕೃತಿಗಳಲ್ಲಿ ‘ಭಾರತದ ಅನ್ವೇಷಣೆ’ ಪ್ರಸಿದ್ಧವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.