


ಬಳ್ಳಾರಿ, 27 ಮೇ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾ ಘಟಕ ವೀರಶೈವ ಲಿಂಗಾಯಿತ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ 375 ವಿದ್ಯಾರ್ಥಿಗಳಿಗೆ `ಪ್ರತಿಭಾ ಪುರಸ್ಕಾರ-2026'ವನ್ನು ಗುರುವಾರ ಬೆಳಿಗ್ಗೆ 9.30 ಗಂಟೆಗೆ ಬಳ್ಳಾರಿಯ ಶ್ರೀಶ್ರೀಶ್ರೀ ಸದ್ಗುರು ಮಹಾದೇವ ತಾತನವರ ಮಠದಲ್ಲಿ ಹಮ್ಮಿಕೊಂಡಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಸುಮಾರು 375 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ನಿರಂಜನ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯವಹಿಸುವರು.
ಕಿಷ್ಕಂದಾ ವಿಶ್ವವಿದ್ಯಾಲಯದ ಸಹ-ಕುಲಪತಿಗಳಾಗಿರುವ ವೈ.ಜೆ. ಪೃಥ್ವಿರಾಜ್ ಭೂಪಾಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷರಾದ ಎಸ್.ಎಂ. ಭದ್ರಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅರಣ್ಯ, ಶಿಕ್ಷಣ, ಪೊಲೀಸ್, ಸಾಹಿತ್ಯ, ಸಮಾಜಸೇವೆ ಹಾಗೂ ಸಾರ್ವಜನಿಕ ಕ್ಷೇತ್ರದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.
ಶಿಕ್ಷಣ ಮತ್ತು ವೃತ್ತಿ ಮಾರ್ಗದರ್ಶನ ಕುರಿತು `10ನೇ ಮತ್ತು 12ನೇ ತರಗತಿಯ ನಂತರದ ದಾರಿ-ಉನ್ನತ ಶಿಕ್ಷಣ ಮತ್ತು ವೃತ್ತಿ ಅವಕಾಶಗಳು' ವಿಷಯದ ಕುರಿತು ಬಿಐಟಿಎಂನ ಉಪ ಪ್ರಾಂಶುಪಾಲರಾಗಿರುವ ಡಾ. ಬಸವರಾಜ ಖೇಣೇದ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಉಪನ್ಯಾಸವು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾರ್ಗದರ್ಶಕವಾಗಲಿದೆ.
ಸಮಾಜ, ಸಾಹಿತ್ಯ, ಶಿಕ್ಷಣ ಮತ್ತು ವಿಶೇಷ ಸಾಧನೆ ಮಾಡಿದ ಗಣ್ಯರನ್ನು `ಅಕ್ಷರ ಸಾಧಕ'ರನ್ನು ಹಾಗೂ `ವಿಶೇಷ ಸಾಧಕರನ್ನು' ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಶಿಕ್ಷಣ ಹಾಗೂ ವಿಶೇಷ ಚೇತನರ ಸೇವಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್