ಬಳ್ಳಾರಿ : ತೈಲ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ
ಬಳ್ಳಾರಿ, 27 ಮೇ (ಹಿ.ಸ.) : ಆ್ಯಂಕರ್ : ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಎಸ್ಯುಸಿಐ(ಸಿ)ಯು ಹಳೆಯ ತಾಲೂಕು ಕಚೇರಿಯ ಮುಂದೆ ಬುಧವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು. ಜಿಲ್ಲಾ ಸೆಕ್ರಟೇರಿಯಟ್ ಸದಸ್ಯರಾದ ಡಿ. ನಾಗಲಕ್ಷ್ಮಿ ಅವರು, ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ
ಬಳ್ಳಾರಿ : ತೈಲ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ


ಬಳ್ಳಾರಿ, 27 ಮೇ (ಹಿ.ಸ.) :

ಆ್ಯಂಕರ್ : ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಎಸ್ಯುಸಿಐ(ಸಿ)ಯು ಹಳೆಯ ತಾಲೂಕು ಕಚೇರಿಯ ಮುಂದೆ ಬುಧವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.

ಜಿಲ್ಲಾ ಸೆಕ್ರಟೇರಿಯಟ್ ಸದಸ್ಯರಾದ ಡಿ. ನಾಗಲಕ್ಷ್ಮಿ ಅವರು, ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ - ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ ಭಾರತವು ರμÁ್ಯದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಬೆಲೆ ಏರಿಕೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗಳನ್ನು ತಕ್ಷಣವೇ ಕಡಿತಗೊಳಿಸಬೇಕು, ತೈಲ ಕಂಪನಿಗಳ ಲಾಭಕ್ಕಾಗಿ, ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು. ಈ ಯುದ್ಧವನ್ನು ನಿಲ್ಲಿಸುವಂತೆ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದರು.

ಜಿಲ್ಲಾ ಸಮಿತಿ ಸದಸ್ಯರಾದ ಆರ್. ಸೋಮಶೇಖರಗೌಡ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲಬೆಲೆ ಇಳಿಕೆ ಆಗಿದ್ದರೂ ಭಾರತದಲ್ಲಿ ಮಾತ್ರ ತೈಲ ಬೆಲೆ ಕ್ರಮೇಣ ಹೆಚ್ಚುತ್ತಲೆ ಇದೆ. ತೈಲ ಕಂಪನಿಗಳು ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡಿವೆ. ಈ ಹಿಂದಿನ ಕಾಂಗ್ರೆಸ್ನ ಬೆಲೆ ಏರಿಕೆ ನೀತಿಯನ್ನೇ ಬಿಜೆಪಿ ಮುಂದುವರಿಸಿದೆ. ಈ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಜನ ವಿರೋಧಿಯಾಗಿವೆ ಎಂದರು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಸದಸ್ಯರಾದ ಡಾ. ಪ್ರಮೋದ್ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ಮಂಜುಳಾ, ಎ. ದೇವದಾಸ್, ಶಾಂತಾ, ಗೋವಿಂದ್, ಈಶ್ವರಿ ಹಾಗೂ ನಿವೃತ್ತ ಉಪನ್ಯಾಸಕರಾದ ನರಸಣ್ಣ ಮತ್ತು ಪಕ್ಷದ ಕಾರ್ಯಕರ್ತರಾದ ಹನುಮಪ್ಪ, ಪಂಪಾಪತಿ, ಸೌಮ್ಯ, ಅಭಿಲಾಷ, ಶಾಂತಿ, ವಿದ್ಯಾ, ಮುಂತಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande