ಸಿದ್ದರಾಮಯ್ಯ ಬದಲಾವಣೆ ಊಹಾಪೋಹ : ಸುರ್ಜೇವಾಲ
ಪ್ರತಿಪಕ್ಷ
ಸಿದ್ದರಾಮಯ್ಯ ಬದಲಾವಣೆ ಊಹಾಪೋಹ : ಸುರ್ಜೇವಾಲ


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ಮತ್ತು ಕುತೂಹಲ ಸೃಷ್ಟಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಈ ವಿದ್ಯಮಾನಗಳಿಗೆ ಪೂರಕವಾಗಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ತೀವ್ರಗೊಂಡಿವೆ.

ಆದರೆ ಈ ಎಲ್ಲ ವಿದ್ಯಮಾನಗಳ ನಡುವೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಚ್ಚರಿಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, “ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬೇಡಿ,” ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನೇ ಕರೆಯಲಾಗಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಪಕ್ಷದ ಅಧಿಕೃತ ನಿರ್ಧಾರ ಯಾವುದೂ ಹೊರಬಂದಿಲ್ಲ ಎಂದರು.

ಈ ವೇಳೆ ಸುರ್ಜೇವಾಲ, ಸಿದ್ದರಾಮಯ್ಯ ಅವರ ಆಡಳಿತ ಅನುಭವವನ್ನು ಶ್ಲಾಘಿಸಿದರು. “ಪ್ರತಿಪಕ್ಷ ನಾಯಕರಾಗಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದ್ದ ಸಿದ್ದರಾಮಯ್ಯ ಅವರು ಈಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ,” ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಹೊಗಳಿದ ಅವರು, “ಡಿಕೆ ಶಿವಕುಮಾರ್ ಹಲವು ಮುಖ್ಯಮಂತ್ರಿಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರು ಉತ್ತಮ ಸಂಘಟನಾ ಚತುರರು,” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande