ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ : ಮಧು ಬಂಗಾರಪ್ಪ
ಶಿವಮೊಗ್ಗ, 27 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆಯೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿ
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ : ಮಧು ಬಂಗಾರಪ್ಪ


ಶಿವಮೊಗ್ಗ, 27 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆಯೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಲು ನಾನು ಚಿಕ್ಕವನು. ಆ ಕುರಿತು ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್ ಕೆಲಸ” ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಬೆಂಗಳೂರಿಗೆ ಮರಳಿದ್ದಾರೆ ಎಂದು ತಿಳಿಸಿದ ಅವರು, “ನಾನು ಶಿವಮೊಗ್ಗದ ಸಭೆ ಮುಗಿಸಿಕೊಂಡು ಬೆಂಗಳೂರಿಗೆ ಹೋಗುತ್ತೇನೆ. ಈ ಕುರಿತು ನನಗೆ ಹೆಚ್ಚಿನ ಮಾಹಿತಿ ಇಲ್ಲ. ಬ್ರೇಕ್ಫಾಸ್ಟ್ ಸಭೆ ಬಗ್ಗೆ ನಿನ್ನೆಯೇ ಮಾಹಿತಿ ಬಂದಿತ್ತು. ನಾಳೆ ಸಭೆಗೆ ಹೋಗುತ್ತೇವೆ” ಎಂದರು.

ರಾಜಕೀಯ ಬೆಳವಣಿಗೆಗಳ ಬಗ್ಗೆ ಅತಿಯಾಗಿ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಹೇಳಿದ ಮಧು ಬಂಗಾರಪ್ಪ, “ರಾಜ್ಯ ಮಟ್ಟದ ಸಚಿವನಾಗಿ ನನಗೆ ಕೆಲವು ಮಿತಿಗಳಿವೆ. ಸುಮ್ಮನೆ ಏನೇನೋ ಮಾತನಾಡುವುದು ಸೂಕ್ತವಲ್ಲ. ನಮಗೆ ಕೊಟ್ಟಿರುವ ಕೆಲಸ ಮಾಡಿಕೊಂಡು ಹೋಗುವುದು ಒಳ್ಳೆಯದು” ಎಂದು ಹೇಳಿದರು.

ಜೂನ್ 1ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕೆಪಿಎಸ್ ಶಾಲೆಯ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ತಿಳಿಸಿದ ಅವರು, “ಮುಂದಿನ ದಿನಗಳಲ್ಲಿ ಯಾವ ಬೆಳವಣಿಗೆ ಆಗುತ್ತದೆ ನೋಡೋಣ. ಅದರ ಪ್ರಕಾರ ಕಾರ್ಯಕ್ರಮ ನಡೆಸಲಾಗುತ್ತದೆ” ಎಂದರು.

ರಾಜ್ಯದ ಶಾಲೆಗಳ ಆರಂಭ ಕುರಿತು ಮಾತನಾಡಿದ ಅವರು, “ಜೂನ್ 1ರಿಂದ ರಾಜ್ಯದ ಎಲ್ಲಾ ಶಾಲೆಗಳು ಆರಂಭವಾಗಲಿವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. 42 ಸಾವಿರ ಶಾಲೆಗಳ ಕುರಿತು ವಿಡಿಯೊ ಸಂವಾದ ನಡೆಸಿದ್ದೇವೆ. ಎಲ್ಲ ಶಾಲೆಗಳಿಗೂ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ” ಎಂದು ಮಾಹಿತಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande