ನುಡಿದಂತೆ ನಡೆದು ಜನರ ವಿಶ್ವಾಸ ಉಳಿಸಿದ್ದೇವೆ : ಸಿದ್ದರಾಮಯ್ಯ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆ
Cm post


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿನ ಎಲ್ಲ ಸಾಧನೆಗಳ ಶ್ರೇಯಸ್ಸು ಪ್ರತಿಯೊಬ್ಬ ಕನ್ನಡಿಗನಿಗೂ ಸೇರಬೇಕು” ಎಂದು ಹೇಳಿದ್ದಾರೆ.

ಚುನಾವಣೆಗೆ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧತೆಯಿಂದ ನಡೆದುಕೊಂಡಿದೆ ಎಂದು ತಿಳಿಸಿದ ಮುಖ್ಯಮಂತ್ರಿ, “ಜನತೆಗೆ ನೀಡಿದ ಪ್ರತಿಯೊಂದು ಮಾತನ್ನೂ ಉಳಿಸಿಕೊಂಡ ಹೆಮ್ಮೆ ನಮಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಪ್ರತಿಯೊಂದು ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ ಕುರಿತು ವಿಶೇಷವಾಗಿ ಪ್ರಸ್ತಾಪಿಸಿದ ಅವರು, “ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆ ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ಒದಗಿಸಿದೆ. ಇದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದೆ” ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಗಾಗಿ ಸರ್ಕಾರ ಇದುವರೆಗೆ 18,897 ಕೋಟಿ ರೂಪಾಯಿ ವೆಚ್ಚ ಮಾಡಿದ್ದು, ರಾಜ್ಯದ 4.26 ಕೋಟಿ ಪಡಿತರದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ನಡುವೆ ಮುಖ್ಯಮಂತ್ರಿಗಳ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande