
ಶಿವಮೊಗ್ಗ, 28 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಶಿವಮೊಗ್ಗ ವತಿಯಿಂದ 01.07.2026 ರಿಂದ ಪ್ರಾರಂಭವಾಗುವ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಸಂಘ/ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 6 ತಿಂಗಳ ದೂರಶಿಕ್ಷಣ ಕೋರ್ಸ್ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೆಗ್ಯುಲರ್ ಡಿಪ್ಲೊಮಾ ತರಬೇತಿ ನೀಡಲಾಗುತ್ತದೆ. ಜುಲೈ–ಡಿಸೆಂಬರ್ ಹಾಗೂ ಜನವರಿ–ಜೂನ್ ಎಂಬಂತೆ ವರ್ಷಕ್ಕೆ ಎರಡು ಬ್ಯಾಚ್ಗಳಲ್ಲಿ ತರಬೇತಿ ನಡೆಯಲಿದೆ.
ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸಹಕಾರ ಇಲಾಖೆಯ ವಿವಿಧ ಹುದ್ದೆಗಳಲ್ಲಿ ನೇಮಕಾತಿಗೆ ಅರ್ಹತೆ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತರಬೇತಿ ಅವಧಿಯಲ್ಲಿ ಕಂಪ್ಯೂಟರ್ ತರಬೇತಿಯ ಜೊತೆಗೆ ಪ್ರತಿ ತಿಂಗಳು ರೂ. 500/- ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ. 600/- ಶಿಷ್ಯವೇತನ ನೀಡಲಾಗುತ್ತದೆ.
ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್, ಕೆಎಂಎಫ್, ಹಾಲು ಒಕ್ಕೂಟಗಳು ಸೇರಿದಂತೆ ವಿವಿಧ ಸಹಕಾರ ಸಂಸ್ಥೆಗಳ ಉದ್ಯೋಗ ನೇಮಕಾತಿಯಲ್ಲಿ ಈ ಕೋರ್ಸ್ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕೆಎಎಸ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯಕವಾಗುವ ತರಬೇತಿಯನ್ನೂ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್ ಹಾಗೂ ವೈ-ಫೈ ಸೌಲಭ್ಯಗಳೊಂದಿಗೆ ತರಬೇತಿ ನೀಡಲಾಗುವುದು. ದೂರಶಿಕ್ಷಣ ಕೋರ್ಸ್ಗೆ ಸಂಬಂಧಿಸಿದಂತೆ ಸಹಕಾರ ಸಂಘಗಳ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ಅವಕಾಶವಿರುತ್ತದೆ.
ಆಸಕ್ತರು ಅಧಿಕೃತ ವೆಬ್ಸೈಟ್ www.ksefdem.co.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25 ಆಗಿದೆ.
ಹೆಚ್ಚಿನ ಮಾಹಿತಿಗಾಗಿ 08182 248873, 9449075746, 9845068191, 7022441115, 7026246493, 9482216930 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.