
ಹಾಸನ, 28 ಮೇ (ಹಿ.ಸ.) :
ಆ್ಯಂಕರ್ : ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದ ಬಾಗಿವಾಳು ಹಾಗೂ ಅರಕಲಗೂಡು ರಸ್ತೆಯ ಈದ್ಗಾ ಮೈದಾನದಲ್ಲಿ ನಡೆದ ಬಕ್ರಿದ್ ಹಬ್ಬದ ಆಚರಣೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಿ ಮುಸ್ಲಿಂ ಬಾಂಧವರೊಂದಿಗೆ ಹಬ್ಬದ ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರೀತಿ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳನ್ನು ಸಾರುವ ಬಕ್ರಿದ್ ಹಬ್ಬವು ಸಮಾಜದಲ್ಲಿ ಸೌಹಾರ್ದತೆ ಹಾಗೂ ಏಕತೆಯ ಸಂದೇಶವನ್ನು ಸಾರುತ್ತದೆ” ಎಂದು ಹೇಳಿದರು.
ಪವಿತ್ರ ಹಬ್ಬದ ಅಂಗವಾಗಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಂಸದರು, ಕ್ಷೇತ್ರದ ಜನತೆಗೆ ಬಕ್ರಿದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಹಬ್ಬದ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಜನರು ಭಾಗವಹಿಸಿ ಸಹಬಾಳ್ವೆ ಮತ್ತು ಸೌಹಾರ್ದತೆಯ ಸಂದೇಶ ಸಾರಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.