
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಇದೀಗ ಬಹುತೇಕ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ. ನಂತರ ಡಿ.ಕೆ.ಶಿವಕುಮಾರ್ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಸ್ವತಃ ತಿಳಿಸಿದ್ದಾರೆ” ಎಂದು ಹೇಳಿದರು.
“ಡಿಕೆ ಶಿವಕುಮಾರ್ ಅವರೇ ಮುಂದಿನ ಸಿಎಂ ಆಗುತ್ತಾರೆ. ಈ ನಿರ್ಧಾರಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.