ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ಸಂಘಟನೆ : ಬಳ್ಳಾರಿ ಜಿಲ್ಲಾ ಸಂಚಾಲಕರಾಗಿ ವೆಂಕಟೇಶ ದೇಸಾಯಿ
ಬಳ್ಳಾರಿ, 28 ಮೇ (ಹಿ.ಸ.) : ಆ್ಯಂಕರ್ : ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ಸಂಘಟನೆ ಬಳ್ಳಾರಿ ಜಿಲ್ಲಾ ಸಂಚಾಲಕರಾಗಿ ಹಿರಿಯ ವರದಿಗಾರ ವೆಂಕಟೇಶ ದೇಸಾಯಿ ನೇಮಕಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿಯ ಶ್ರೀ ಚಿದಂಬರ ಆಶ್ರಮದಲ್ಲಿ ಆಯೋಜಿಸಿದ್ದ ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ವೇದಿಕೆಯ ದ
ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ಸಂಘಟನೆ : ಬಳ್ಳಾರಿ ಜಿಲ್ಲಾ ಸಂಚಾಲಕರಾಗಿ ವೆಂಕಟೇಶ ದೇಸಾಯಿ


ಬಳ್ಳಾರಿ, 28 ಮೇ (ಹಿ.ಸ.) :

ಆ್ಯಂಕರ್ : ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ಸಂಘಟನೆ ಬಳ್ಳಾರಿ ಜಿಲ್ಲಾ ಸಂಚಾಲಕರಾಗಿ ಹಿರಿಯ ವರದಿಗಾರ ವೆಂಕಟೇಶ ದೇಸಾಯಿ ನೇಮಕಗೊಂಡಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿಯ ಶ್ರೀ ಚಿದಂಬರ ಆಶ್ರಮದಲ್ಲಿ ಆಯೋಜಿಸಿದ್ದ ಸಮಾನ ಮನಸ್ಕ ಮಾಧ್ಯಮ ಮಿತ್ರರ ವಿಕಾಸ ವೇದಿಕೆಯ ದಶಮಾನೋತ್ಸವ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀನಾಥ್ ಜೋಶಿ, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ ಅವರು, ಹಿರಿಯ ವರದಿಗಾರ ವೆಂಕಟೇಶ ದೇಸಾಯಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಜಯವಾಣಿ ಪತ್ರಿಕೆಯ ಉಪ ಪ್ರಧಾನ ಸಂಪಾದಕ ರಾಘವೇಂದ್ರ, ಹಿರಿಯ ಉಪಾಧ್ಯಕ್ಷ ಬಿ.ಎನ್. ರಾಘವೇಂದ್ರ, ಖಜಾಂಚಿ ಮುರುಳಿ ಪ್ರಸಾದ್, ಕಾರ್ಯದರ್ಶಿ ಡಿ.ಎನ್.ಗೋದಾವರಿ, ಚಿದಂಬರ ಆಶ್ರಮದ ಆಡಳಿತಾಧಿಕಾರಿಗಳು, ವಿವಿಧ ಗಣ್ಯರು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande