
ದಾವಣಗೆರೆ, 28 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆಯ ಎಸ್.ಎಂ. ಕೃಷ್ಣನಗರ ನಗರ ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಸಮರ್ಥ ಶಾಮನೂರು ಭೇಟಿ ನೀಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗಳು, ಮೂಲಸೌಕರ್ಯಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಆರೋಗ್ಯ ಕೇಂದ್ರದ ಪರಿಸ್ಥಿತಿ, ಚಿಕಿತ್ಸೆ ವ್ಯವಸ್ಥೆ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡು, ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ನಂತರ ಅವರು ಆಸ್ಪತ್ರೆಯ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಾಬು ಜಗಜೀವನರಾಂ ಭವನಕ್ಕೆ ಭೇಟಿ ನೀಡಿ ಕಟ್ಟಡದ ಸುಸ್ಥಿತಿ ಹಾಗೂ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.
ಭವನದ ನಿರ್ವಹಣೆ ಮತ್ತು ಮೂಲಸೌಕರ್ಯಗಳ ಸಂರಕ್ಷಣೆಗಾಗಿ ಸಂಬಂಧಪಟ್ಟ ಆಡಳಿತ ಮಂಡಳಿ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಸಮರ್ಥ ಶಾಮನೂರು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.