ಬಕ್ರೀದ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ದೇಶದಾದ್ಯಂತ ಇಂದು ಆಚರಿಸಲಾಗುತ್ತಿರುವ ಈದ್-ಉಲ್-ಅಝ್ಹಾ (ಬಕ್ರೀದ್) ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಈದ್-ಉಲ್-ಅಝ್
Pm


ನವದೆಹಲಿ, 28 ಮೇ (ಹಿ.ಸ.) :

ಆ್ಯಂಕರ್ : ದೇಶದಾದ್ಯಂತ ಇಂದು ಆಚರಿಸಲಾಗುತ್ತಿರುವ ಈದ್-ಉಲ್-ಅಝ್ಹಾ (ಬಕ್ರೀದ್) ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಈದ್-ಉಲ್-ಅಝ್ಹಾ ಹಬ್ಬದ ಶುಭಾಶಯಗಳು. ಈ ವಿಶೇಷ ಸಂದರ್ಭವು ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ಸಂತಸದ ಭಾವನೆಯನ್ನು ಇನ್ನಷ್ಟು ಬಲಪಡಿಸಲಿ. ಎಲ್ಲರಿಗೂ ಯಶಸ್ಸು ಹಾಗೂ ಉತ್ತಮ ಆರೋಗ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈದ್-ಉಲ್-ಅಝ್ಹಾ ಹಬ್ಬವನ್ನು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿ ಆಚರಿಸಲಾಗುತ್ತದೆ. ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ನಮಾಜ್ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande