
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
“ನುಡಿದಂತೆ ನಡೆದ ನಾಯಕ, ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತಕ್ಕೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಅವರು ತಿಳಿಸಿದ್ದಾರೆ.
ರಾಜೀನಾಮೆ ನೀಡಿರುವ ಅವರ ನಿರ್ಧಾರವು ರಾಜಕೀಯ ಮುತ್ಸದ್ದಿತನದ ಪ್ರತೀಕವಾಗಿದ್ದು, ಅವರ ನಾಯಕತ್ವದ ಶಿಸ್ತನ್ನು ತೋರಿಸುತ್ತದೆ ಎಂದು ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಸಾರಿಗೆ ಮತ್ತು ಮುಜರಾಯಿ ಸಚಿವನಾಗಿ ಅವರೊಂದಿಗೆ ಕೆಲಸ ಮಾಡಿದ ಅನುಭವ ಅತ್ಯಮೂಲ್ಯವಾದದ್ದು ಎಂದು ಹೇಳಿದ ಅವರು, ಸಿದ್ದರಾಮಯ್ಯ ಅವರು ಹಾಕಿಕೊಟ್ಟ ಜನಕಲ್ಯಾಣದ ಹಾದಿಯಲ್ಲೇ ಸರ್ಕಾರ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿದ್ದರೂ ಇಲ್ಲದಿದ್ದರೂ ಬಡವರ ಧ್ವನಿಯಾಗಿ ರಾಜ್ಯದ ಜನರ ಪರ ಹೋರಾಡುವ ಅವರ ಸಂಕಲ್ಪ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.