ಶಿವಮೊಗ್ಗ ಜಿಲ್ಲಾ ಪೊಲೀಸರಿಂದ 103ನೇ ರಕ್ತದಾನ ಶಿಬಿರ
ಶಿವಮೊಗ್ಗ, 29 ಮೇ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಸಾಗರ ರಸ್ತೆಯಲ್ಲಿರುವ ಸತ್ಯಂ ಫೋರ್ ವಿಂಗ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ ಕಟ್ಟಡದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 103ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿ,
Blood camp


ಶಿವಮೊಗ್ಗ, 29 ಮೇ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಸಾಗರ ರಸ್ತೆಯಲ್ಲಿರುವ ಸತ್ಯಂ ಫೋರ್ ವಿಂಗ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ ಕಟ್ಟಡದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 103ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿ, ಮಹಿಳೆಯರು ಹಾಗೂ ಸಂಸ್ಥೆಯ ನೌಕರರು ಸೇರಿದಂತೆ ಒಟ್ಟು 24 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ರಕ್ತದಾನದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸತ್ಯಂ ಫೋರ್ ವಿಂಗ್ಸ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande