ರಾಯಚೂರು : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ರಾಯಚೂರು, 29 ಮೇ (ಹಿ.ಸ.) : ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 13 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹು
ರಾಯಚೂರು : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ


ರಾಯಚೂರು, 29 ಮೇ (ಹಿ.ಸ.) :

ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 13 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಸ್ಥಳೀಯ ಗ್ರಾಮ ಪಂಚಾಯತಿಯ ಸಂಬ0ಧಿಸಿದ ಮೀಸಲಾತಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿ ರಾಯಚೂರು ವೆಬ್ಸೈಟ್ ವಿಳಾಸ: zpraichur.kar.nic.in ನಲ್ಲಿ ಸಲ್ಲಿಸಬಹುದಾಗಿದೆ.

ಸೂಚನೆಗಳನ್ನು ಹಾಗೂ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೂಲಂಕುಷವಾಗಿ ಓದಿ ಅರ್ಥೈಸಿಕೊಂಡು ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಜೂನ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ)ಯಲ್ಲಿ ಉತ್ತೀರ್ಣವಾಗಿರತಕ್ಕದ್ದು, ಮತ್ತು ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣವಾಗಿರಬೇಕು.

ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande