
ಹಾವೇರಿ, 29 ಮೇ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವ ನಗರದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಮಾತೋಶ್ರೀ ಗಂಗಮ್ಮ ಎಸ್. ಬೊಮ್ಮಾಯಿ ಟ್ರಸ್ಟ್, ಸೋಮಪ್ಪ ಆರ್. ಬೊಮ್ಮಾಯಿ ಟ್ರಸ್ಟ್ ಹಾಗೂ ಯುವ ಮುಖಂಡ ಭರತ ಬೊಮ್ಮಾಯಿ ಅವರ ನೇತೃತ್ವದಲ್ಲಿ ಆಯೋಜಿಸಲಾದ “ಬೃಹತ್ ಉದ್ಯೋಗ ಸಮ್ಮೇಳನ–2026” ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಪ್ರಯೋಜನವನ್ನು ಯುವಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಉದ್ಯೋಗ ಸಮ್ಮೇಳನದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಉದ್ಯೋಗಾಕಾಂಕ್ಷಿಗಳ ಸಂದರ್ಶನ ಹಾಗೂ ನೇಮಕಾತಿ ಪ್ರಕ್ರಿಯೆ ನಡೆಸಿದವು. ಶಿಗ್ಗಾಂವ ಹಾಗೂ ಸವಣೂರ ತಾಲೂಕಿನ ನೂರಾರು ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.