ನಾಳೆ ಸಂಜೆ ವಿಧಾನ ಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Letter


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಮೇ 30, 2026ರ ಶನಿವಾರ ಸಂಜೆ 4 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 3340ರ ‘ಸಮ್ಮೇಳನ ಸಭಾಂಗಣ’ದಲ್ಲಿ ಕರೆಯಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ವಹಿಸಲಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.

ಶಾಸಕಾಂಗ ಪಕ್ಷದ ಎಲ್ಲಾ ಸದಸ್ಯರು ವಿಧಾನ ಸಭೆ, ವಿಧಾನ ಪರಿಷತ್ತು, ಲೋಕ ಸಭೆ, ರಾಜ್ಯಸಭೆ ಸದಸ್ಯರು ಹಾಗೂ ಬಾಹ್ಯ ಬೆಂಬಲಿತ ಸದಸ್ಯರು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಕೆಪಿಸಿಸಿ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande