
ಮೈಸೂರು, 29 ಮೇ (ಹಿ.ಸ.) :
ಆ್ಯಂಕರ್ : ಮೈಸೂರಿನಲ್ಲಿ ಇಂದು ಆಯೋಜಿಸಲಾಗಿದ್ದ ‘ಸಿಐಐ ಮೈಸೂರು ಮೈಹೋಪ್ 2026’ ಸಮ್ಮೇಳನವನ್ನು ಮಾಜಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಮುಂಬರುವ ದಿನಗಳಲ್ಲಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಮೈಸೂರನ್ನು ಟೈರ್-1 ಹೆಲ್ತ್ಕೇರ್ ಹಬ್ ಆಗಿ ರೂಪಿಸುವ ಕುರಿತು ಸಮ್ಮೇಳನದಲ್ಲಿ ಮಹತ್ವದ ಚರ್ಚೆಗಳು ನಡೆದವು.
ಸಮ್ಮೇಳನದಲ್ಲಿ ಮಾತನಾಡಿದ ಗಣ್ಯರು, ಅತ್ಯುತ್ತಮ ವೈದ್ಯಕೀಯ ಸಂಸ್ಥೆಗಳು, ಉತ್ತಮ ಶೈಕ್ಷಣಿಕ ವಾತಾವರಣ, ಸುಲಭ ಸಂಪರ್ಕ ವ್ಯವಸ್ಥೆ ಹಾಗೂ ರೋಗಿಗಳಿಗೆ ಪೂರಕವಾದ ಪರಿಸರದ ಕಾರಣ ಮೈಸೂರು ನಗರವು ಇಡೀ ಕರ್ನಾಟಕ ಹಾಗೂ ನೆರೆ ರಾಜ್ಯಗಳ ಜನರಿಗೆ ಪ್ರಮುಖ ವೈದ್ಯಕೀಯ ಕೇಂದ್ರವಾಗುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟರು.
ಆಧುನಿಕ ಮೂಲಸೌಕರ್ಯ, ನುರಿತ ಮಾನವ ಸಂಪನ್ಮೂಲ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಯಿತು.
ಸಮ್ಮೇಳನದಲ್ಲಿ ಆರೋಗ್ಯ ಕ್ಷೇತ್ರದ ನಾಯಕರು, ಆಸ್ಪತ್ರೆಗಳ ಆಡಳಿತಾಧಿಕಾರಿಗಳು, ವೈದ್ಯಕೀಯ ವೃತ್ತಿಪರರು ಹಾಗೂ ನೀತಿ ನಿರೂಪಕರು ಭಾಗವಹಿಸಿ ಆರೋಗ್ಯ ಸೇವೆಗಳ ಗುಣಮಟ್ಟ ವೃದ್ಧಿ, ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಹೊಸತನ ಮತ್ತು ಜಂಟಿ ಸಹಭಾಗಿತ್ವದ ಮೂಲಕ ಮೈಸೂರನ್ನು ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನೆಯ ಪ್ರಮುಖ ಉತ್ಕೃಷ್ಟತಾ ಕೇಂದ್ರವನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದೆ ಎಂದು ಸಮ್ಮೇಳನದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.