ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿಬಂಧ ಮತ್ತು ಚಿತ್ರಕಲಾ ಸ್ಪರ್ಧೆ
ಧಾರವಾಡ, 29 ಮೇ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ಜೆ.ಎಸ್.ಎಸ್ ವಿದ್ಯಾಗಿರಿ ಧಾರವಾಡ ಇವರುಗಳ ಸಹಯೋಗದಲ್ಲಿ ವಿ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿಬಂಧ ಮತ್ತು ಚಿತ್ರಕಲಾ ಸ್ಪರ್ಧೆ


ಧಾರವಾಡ, 29 ಮೇ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ಜೆ.ಎಸ್.ಎಸ್ ವಿದ್ಯಾಗಿರಿ ಧಾರವಾಡ ಇವರುಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಜೂನ್ 02, 2026 ರಂದು ಧಾರವಾಡ ವಿದ್ಯಾಗಿರಿಯ ಜೆ.ಎಸ್.ಎಸ್ ಆವರಣದಲ್ಲಿನ ಉತ್ಸವ ಹಾಲ್ದಲ್ಲಿ ಹುಬ್ಬಳ್ಳಿ-ಧಾರವಾಡ ನಗರದ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿಧ್ಯಾರ್ಥಿಗಳಿಗೆ ಹವಾಮಾನ ಬದಲಾವಣೆ (ಪ್ರಕೃತಿಯಿಂದ ಪ್ರೇರಿತ. ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ) ಎಂಬ ವಿಷಯದ ಬಗ್ಗೆ ನಿಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಪರಿಸರ ಸಂರಕ್ಷಣೆಯ ಸಂದೇಶವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸಿ ಹಸಿರು ಭವಿಷ್ಯ ನಿರ್ಮಾಣದತ್ತ ಸಮೂಹ ಪ್ರಯತ್ನಕ್ಕೆ ಉತ್ತೇಜನ ನೀಡುವುದು ಈ ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜೂನ್ 05, 2026 ರಂದು ಬೆಳಗ್ಗೆ 11 ಘಂಟೆಗೆ ಧಾರವಾಡ ವಿದ್ಯಾಗಿರಿಯ ಜೆ.ಎಸ್.ಎಸ್ ಆವರಣದಲ್ಲಿನ ಉತ್ಸವ ಹಾಲ್ದಲ್ಲಿ ಜರಗುವ ಮುಖ್ಯ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande