
ಗದಗ, 29 ಮೇ (ಹಿ.ಸ.) :
ಆ್ಯಂಕರ್ : ಗದಗದಲ್ಲಿ ವಿವಿಧ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಹ್ವಾನಿಸಿದರು.
ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಕಾರ್ಯಕರ್ತರು ಸಮಾವೇಶದ ಉದ್ದೇಶ, ಆಶಯ ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಶ್ರೀಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ತೋಂಟದ ಸಿದ್ಧರಾಮ ಶ್ರೀಗಳು, ಮೇ 30ರಿಂದ ಎರಡು ದಿನಗಳ ಪೂರ್ವನಿಗದಿತ ಕಾರ್ಯಕ್ರಮಗಳಿರುವ ಕಾರಣ ಸಮಾವೇಶದಲ್ಲಿ ಭಾಗವಹಿಸಲು ಅನಾನುಕೂಲವಾಗುತ್ತಿದೆ ಎಂದು ತಿಳಿಸಿದರು. ಜೊತೆಗೆ ಬಸವಾದಿ ಶಿವಶರಣರ ಹಿಂದೂ ಸಮಾವೇಶ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ವೇಳೆ ಸಮಿತಿ ಪದಾಧಿಕಾರಿಗಳಾದ ಅರವಿಂದ ಹುಲ್ಲೂರ, ಉಡಚಪ್ಪ ಹಳ್ಳಿಕೇರಿ, ಶ್ರೀನಿವಾಸ ಹುಬ್ಬಳ್ಳಿ, ಶ್ರೀಧರ ಕುಲಕರ್ಣಿ, ಮಾರುತಿ ಪವಾರ, ಡಾ. ಗಣೇಶ ಸುಲ್ತಾನಪುರ ಸೇರಿದಂತೆ ಶಿವಯೋಗಿ ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP