
ಕೊಪ್ಪಳ, 29 ಮೇ (ಹಿ.ಸ.) :
ಆ್ಯಂಕರ್ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕವು ಶನಿವಾರ ಸಂಜೆ 5.30ಕ್ಕೆ ಕಿನ್ನಾಳ ರಸ್ತೆಯಲ್ಲಿರುವ ವಿಠ್ಠಲಕೃಷ್ಣ ವಾಣಿಜ್ಯ ಸಂಕೀರ್ಣ ಹಿಂಭಾಗದ ಸಭಾಂಗಣದಲ್ಲಿ ಸಮುದಾಯದ ಸಾಧಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ.
ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಎಸ್. ರಘುನಾಥ್, ಜಿಲ್ಲಾ ಚುನಾಯಿತ ಪ್ರತಿನಿಧಿ ಗುರುರಾಜ ಎನ್. ಜೋಶಿ, ರಾಜ್ಯ ಉಪಾಧ್ಯಕ್ಷ ಪ್ರಾಣೇಶ ಮಾದಿನೂರು, ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಹನುಮಂತರಾವ್ ದೇಶಪಾಂಡೆ, ಸಂಚಾಲಕ ಪ್ರಶಾಂತ ಕುಲಕರ್ಣಿ, ಬ್ರಾಹ್ಮಣ ಸಮಾಜದ ಮಾಜಿ ಅಧ್ಯಕ್ಷ ಡಾ. ಕೆ.ಜಿ. ಕುಲಕರ್ಣಿ, ಮಹಾಸಭಾದ ನಿಕಟಪೂರ್ವ ಜಿಲ್ಲಾ ಮಹಿಳಾ ಸಂಚಾಲಕಿ ವೈಷ್ಣವಿ ಹುಲಗಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ವೇದಘೋಷ, ಪ್ರಾರ್ಥನೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರುರಾಜ ಎನ್.ಜೋಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್