ಬಂಜಾರ ಸಮುದಾಯಕ್ಕೆ ಕಾನೂನು ಅರಿವು, ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ, 29 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರ
ಬಂಜಾರ ಸಮುದಾಯಕ್ಕೆ ಕಾನೂನು ಅರಿವು, ಆರೋಗ್ಯ ತಪಾಸಣಾ ಶಿಬಿರ


ಶಿವಮೊಗ್ಗ, 29 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಬಂಜಾರ ಸಮುದಾಯದವರಿಗೆ ಕಾನೂನು ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಗ್ರಂಥಪಾಲಕರಿಗೆ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಗಾರವನ್ನು ಮೇ 30ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗ ನಗರದ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವೆಂಕಟೇಶ್ ನಾಯ್ಕ್ ಟಿ. ಘನ ಉಪಸ್ಥಿತಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ ಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ. ಮಂಜುನಾಥ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಎನ್. ಜಯದೇವ ನಾಯ್ಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭಾಗವಹಿಸಲಿದ್ದಾರೆ.

ಇದೇ ವೇಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ಎನ್. ರಾಜು, ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande