ಸೈಬರ್ ಅಪರಾಧ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ
ಗದಗ, 29 ಮೇ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿನ ಮಾರುತಿ ದೇವಸ್ಥಾನದ ಆವರಣದಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಸೈಬರ್ ಅಪರಾಧ ತಡೆ ಹಾಗೂ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಲಕ್ಕುಂಡಿ ಬೀಟ್ ಪೊಲೀಸ್ ಪೇ
ಫೋಟೋ


ಗದಗ, 29 ಮೇ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿನ ಮಾರುತಿ ದೇವಸ್ಥಾನದ ಆವರಣದಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಸೈಬರ್ ಅಪರಾಧ ತಡೆ ಹಾಗೂ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಲಕ್ಕುಂಡಿ ಬೀಟ್ ಪೊಲೀಸ್ ಪೇದೆ ಪ್ರವೀಣ ಶಾಂತಪ್ಪನವರ ಮಾತನಾಡಿ, ರೈತರು ಹಾಗೂ ವಾಹನ ಸವಾರರಿಗೆ ವಿವಿಧ ಕಾನೂನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ರೈತರು ಪರಿಚಯವಿಲ್ಲದ ಖರೀದಿದಾರರಿಗೆ ಕೃಷಿ ದಾಸ್ತಾನು ಮಾರಾಟ ಮಾಡಬಾರದು. ಸರ್ಕಾರದ ಮಾನ್ಯತೆ ಹೊಂದಿರುವ ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸರಿಯಾದ ಬೆಲೆ ಪಡೆಯಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಿಳಿಸಿದರು. ಬ್ಯಾಂಕ್ ಖಾತೆಯ ಮಾಹಿತಿ, ಎಟಿಎಂ ವಿವರಗಳು ಹಾಗೂ ಮೊಬೈಲ್ಗೆ ಬರುವ ಒಟಿಪಿ ಸಂಖ್ಯೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಎಚ್ಚರಿಸಿದರು.

ಯಾವುದೇ ರೀತಿಯ ಆನ್ಲೈನ್ ಮೋಸ ಅಥವಾ ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ 1930 ಸೈಬರ್ ಸಹಾಯವಾಣಿ ಹಾಗೂ 112 ತುರ್ತು ಸೇವಾ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಿದರು.

ರಸ್ತೆ ಸುರಕ್ಷತೆ ಕುರಿತು ಮಾತನಾಡಿದ ಅವರು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಕಾರು ಚಾಲಕರು ಸೀಟ್ ಬೆಲ್ಟ್ ಬಳಸಬೇಕು ಎಂದು ತಿಳಿಸಿದರು. ಜೊತೆಗೆ ಟ್ಯಾಕ್ಟರ್ ಹಾಗೂ ಟ್ರೈಲರ್ ವಾಹನಗಳಿಗೆ ರೇಡಿಯಂ ಅಳವಡಿಸುವ ಮೂಲಕ ರಾತ್ರಿ ವೇಳೆ ಸಂಭವಿಸುವ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎ.ಎಸ್.ಐ. ವಿ.ಎಸ್. ಹಾಗೂ ಭಿಕ್ಷಾವತಿಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande