
ಬಳ್ಳಾರಿ, 29 ಮೇ (ಹಿ.ಸ.) :
ಆ್ಯಂಕರ್ : ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದ “ಪ್ರಶಿಕ್ಷಣ ವರ್ಗ”ದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಪಕ್ಷದ ಕಾರ್ಯವಿಸ್ತಾರ, ಸಂಘಟನೆ ಹಾಗೂ ಸಿದ್ಧಾಂತಗಳ ಕುರಿತು ಶಿಕ್ಷಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಮಾತನಾಡಿದ ಅವರು, ಪಂಡಿತ್ ದೀನದಯಾಳ್ ಉಪಾಧ್ಯಾಯರ ಏಕಾತ್ಮ ಮಾನವ ದರ್ಶನ ಹಾಗೂ ಅಂತ್ಯೋದಯ ತತ್ವಗಳು ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತದ ಜೀವಾಳವಾಗಿವೆ ಎಂದು ತಿಳಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯೇ ಪಕ್ಷದ ಧ್ಯೇಯವಾಗಿದ್ದು, ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪಕ್ಷದ ವಿಚಾರಧಾರೆಗಳನ್ನು ಜನಸಾಮಾನ್ಯರೊಳಗೆ ಪರಿಣಾಮಕಾರಿಯಾಗಿ ತಲುಪಿಸಬೇಕಾಗಿದೆ ಎಂದು ಕರೆ ನೀಡಿದರು.
ಇಂತಹ ಪ್ರಶಿಕ್ಷಣ ವರ್ಗಗಳು ಕಾರ್ಯಕರ್ತರಲ್ಲಿ ಸಂಘಟನಾ ಶಕ್ತಿ, ನಾಯಕತ್ವ ಗುಣಗಳು ಹಾಗೂ ಪಕ್ಷದ ತತ್ವಸಿದ್ಧಾಂತಗಳ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಅವರು ಹೇಳಿದರು.
ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಪ್ರಮುಖರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.