
ಬಳ್ಳಾರಿ, 29 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 31 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟ್ಯಾಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌಂಡ್, ನಾಗಪ್ಪ ಕಟ್ಟೆ, ಫ್ಲವರ್ಸ್ ಸ್ಟ್ರೀಟ್ ಹಾಗೂ ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂಒ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್