
ಕಲಬುರಗಿ, 29 ಮೇ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿರುವ ಗ್ರಾಹಕ ಸೇವಾ ಕೇಂದ್ರ ಹಾಗೂ ಮಹಾಗಾವ್ ಕ್ರಾಸ್ ಪ್ರದೇಶಕ್ಕೆ ಭೇಟಿ ನೀಡಿದ “ಅಕ್ಕ ಪಡೆ” ತಂಡವು ಸಾರ್ವಜನಿಕರಲ್ಲಿ ವಿವಿಧ ಸಾಮಾಜಿಕ ಮತ್ತು ಕಾನೂನು ಸಂಬಂಧಿತ ವಿಷಯಗಳ ಕುರಿತು ಜಾಗೃತಿ ಮೂಡಿಸಿತು.
ಈ ವೇಳೆ ಬಾಲ್ಯವಿವಾಹ ತಡೆ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ ಹಾಗೂ ಸೈಬರ್ ಅಪರಾಧಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಸಹಾಯವಾಣಿ ಸೇವೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಮಹಿಳೆಯರು ಹಾಗೂ ಮಕ್ಕಳು ಯಾವುದೇ ರೀತಿಯ ಸಮಸ್ಯೆ, ಕಿರುಕುಳ ಅಥವಾ ತುರ್ತು ಪರಿಸ್ಥಿತಿಯನ್ನು ಎದುರಿಸಿದರೆ ಮಹಿಳಾ ಸಹಾಯವಾಣಿ “181” ಹಾಗೂ ಮಕ್ಕಳ ಸಹಾಯವಾಣಿ “1098”ಗೆ ಸಂಪರ್ಕಿಸುವಂತೆ ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.