ಜಲಜೀವನ್ ಮಿಷನ್ ಕಾಮಗಾರಿಗಳ ಪ್ರಗತಿ ಪರಿಶೀಲನೆ
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜಲಜೀವನ್ ಮಿಷನ್ ಕಾರ್ಯಕ್ರಮದಡಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಕಾಮಗಾರಿಗಳು ಹಾಗೂ ಇತರ ಅಂಶಗಳ ಪ್ರಗತಿ ಪರಿಶೀಲನಾ ಸಭೆ ವಿಡಿಯೋ ಸಂವಾ
Meeting


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜಲಜೀವನ್ ಮಿಷನ್ ಕಾರ್ಯಕ್ರಮದಡಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಕಾಮಗಾರಿಗಳು ಹಾಗೂ ಇತರ ಅಂಶಗಳ ಪ್ರಗತಿ ಪರಿಶೀಲನಾ ಸಭೆ ವಿಡಿಯೋ ಸಂವಾದದ ಮೂಲಕ ನಡೆಯಿತು.

ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಕಾಮಗಾರಿಗಳ ಪ್ರಗತಿ, ಯೋಜನೆಗಳ ಅನುಷ್ಠಾನ, ಕುಡಿಯುವ ನೀರಿನ ಸಂಪರ್ಕ ವ್ಯವಸ್ಥೆ ಹಾಗೂ ಗುರಿ ಸಾಧನೆ ಕುರಿತಂತೆ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ RDWSD ಪ್ರಧಾನ ಅಭಿಯಂತರ ಅಶೋಕ ಎಲ್. ವಾಸನದ, ತಾಂತ್ರಿಕ ಸಲಹೆಗಾರ ಎಜಾಜ್ ಹುಸೇನ್, ಉಪಕಾರ್ಯದರ್ಶಿ (ಆಡಳಿತ) ಜಾಫರ್ಶರೀಫ್ ಸುತಾರ, ಉಪಕಾರ್ಯದರ್ಶಿ (ಅಭಿವೃದ್ಧಿ) ಎಸ್.ಸಿ. ಮಹೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು , ಅಧೀಕ್ಷಕ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸಭೆಯಲ್ಲಿ ಭಾಗವಹಿಸಿ ಜಿಲ್ಲಾವಾರು ಪ್ರಗತಿ ಮಾಹಿತಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande