
ಬೆಂಗಳೂರು, 29 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಸಂವಿಧಾನಬದ್ಧ ಪ್ರಕ್ರಿಯೆಯಂತೆ ರಾಜೀನಾಮೆ ಪತ್ರಕ್ಕೆ ರಾಜ್ಯಪಾಲರು ಸಹಿ ಹಾಕಿದ್ದು, ಈ ಸಂಬಂಧ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ ಎರಡು ರಿಂದ ಮೂರು ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಹಿನ್ನೆಲೆ, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದ್ದರು. ಕಾರ್ಯದರ್ಶಿಗಳು ಪತ್ರವನ್ನು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರ ಅಧಿಕೃತ ಸಹಿ ಅಗತ್ಯವಾಗಿತ್ತು.
ಗುರುವಾರ ರಾತ್ರಿ ಇಂದೋರ್ನಿಂದ ಬೆಂಗಳೂರಿಗೆ ಮರಳಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಬೆಳಗ್ಗೆ ರಾಜೀನಾಮೆ ಪತ್ರವನ್ನು ಪರಿಶೀಲಿಸಿ ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.