ನಾಳೆ ಶಾಸಕಾಂಗ ಪಕ್ಷದ ಸಭೆ : ಡಿ.ಕೆ.ಶಿವಕುಮಾರ್
ನಡೆ ಯಲ್ಲಿ
DKS


ನವದೆಹಲಿ, 29 ಮೇ (ಹಿ.ಸ.) :

ಆ್ಯಂಕರ್ : ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲಿ ಇರಲು ಸೂಚಿಸಲಾಗಿದೆ, ವಿಧಾನ ಸೌದಧಲ್ಲಿ ಸಭೆ ನಡೆಯಲಿದ್ದು ಸಮಯ ನಿಗದಿಯಾಗಿಲ್ಲ ಎಂದಿದ್ದಾರೆ. ನಾಳಿನ ಶಾಸಕಾಂಗ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ನೂತನ ಮುಖ್ಯಮಂತ್ರಿ ಪ್ರಮಾಣ ವಚನ ದಿನಾಂಕ ಕುರಿತು ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande