ಬೆಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಚಂದ್
Vp


ಬೆಂಗಳೂರು, 29 ಮೇ (ಹಿ.ಸ.)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಸೇರಿದಂತೆ ಹಲವು ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ವಾಗತ ವ್ಯವಸ್ಥೆ ಮಾಡಲಾಗಿತ್ತು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪುಷ್ಪಗುಚ್ಛ ನೀಡಿ ಗೌರವ ಸಲ್ಲಿಸಿದರು.

ನಗರದ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥೆಯ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಉಪರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ ಸಾನ್ನಿಧ್ಯದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಇದೇ ವೇಳೆ ದಾವಣಗೆರೆಯ ವಿಶ್ವವಿದ್ಯಾಲಯ ಬಿಡಿಟಿ ಎಂಜಿನಿಯರಿಂಗ್ ಕಾಲೇಜು ಸಂಸ್ಥೆಯ ಪ್ಲಾಟಿನಂ ಮಹೋತ್ಸವ ಕಾರ್ಯಕ್ರಮದಲ್ಲೂ ಉಪರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ 75ನೇ ವರ್ಷದ ಸಂಭ್ರಮಕ್ಕೆ ಗಣ್ಯರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರು ಸಾಕ್ಷಿಯಾಗಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande