ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
ಹುಬ್ಬಳ್ಳಿ, 30 ಮೇ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಹಾಗೂ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರ ಇತ್ತೀಚೆಗೆ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಲಾಯಿತು. ರಾಜ್ಯ ಸರ್ಕಾರವು ಮೇ 22, 2026ರಂದು ಕ
ಮನವಿ ಸಲ್ಲಿಕೆ


ಹುಬ್ಬಳ್ಳಿ, 30 ಮೇ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಹಾಗೂ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರ ಇತ್ತೀಚೆಗೆ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಲಾಯಿತು.

ರಾಜ್ಯ ಸರ್ಕಾರವು ಮೇ 22, 2026ರಂದು ಕನಿಷ್ಠ ವೇತನ ಪರಿಷ್ಕರಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು ಹಾಗೂ ಆಟೋ ಟಿಪ್ಪರ್ ಕಸದ ವಾಹನ ಚಾಲಕರಿಗೆ ಪರಿಷ್ಕೃತ ವೇತನವನ್ನು ಪಾವತಿಸುವಂತೆ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಸರ್ಕಾರದ ಆದೇಶವನ್ನು ತ್ವರಿತವಾಗಿ ಜಾರಿಗೊಳಿಸಿ ಕಾರ್ಮಿಕರಿಗೆ ನ್ಯಾಯಯುತ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಎಂ. ಗುಂಟ್ರಾಳ, ಗಂಗಮ್ಮ ಸಿದ್ರಾಮಪುರ, ಕನಕಪ್ಪ ಕೋಟಬಾಗಿ, ಲಕ್ಷ್ಮೀ ವಾಲಿ, ಪಾರವ್ವ ಹೊಸಮನಿ, ನರಸಿಂಹ ಮಾದರ, ಪವನ ಸಗಬಾಳ, ಆನಂದ ಸವಣೂರ, ಪರಶುರಾಮ ಶಿಕ್ಕಲಗಾರ, ಮಂಜುಳಾ ವಜ್ಜಣ್ಣವರ, ರಾಮು ಹೂಗಾರ, ರವಿ ಮೇಲಿನಮನಿ, ತಿಮ್ಮಣ್ಣ ಗುಂಡಲಪಲ್ಲಿ, ರವಿಚಂದ್ರ ಶಾಬಾದ, ನಾಗರಾಜ ಬೇತಾಪಲ್ಲಿ, ಸಂಜೀವ ತುಪ್ಪೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande