
ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಕರ್ನಾಟಕದಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು–2026ರ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದ ರಾಜ್ಯಮಟ್ಟದ ವರ್ಚುವಲ್ ಕಾರ್ಯಾಗಾರವು ಇಂದು ಬೆಂಗಳೂರಿನಲ್ಲಿ ನಡೆಯಿತು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಾಗಾರದಲ್ಲಿ ಗ್ರಾಮೀಣ ಸ್ವಚ್ಛತೆ, ತ್ಯಾಜ್ಯ ವಿಂಗಡಣೆ ಮತ್ತು ಸುಸ್ಥಿರ ತ್ಯಾಜ್ಯ ನಿರ್ವಹಣೆಯ ಮಹತ್ವದ ಕುರಿತು ಚರ್ಚಿಸಲಾಯಿತು.
ಕಾರ್ಯಾಗಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಾ. ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಕಾರ್ಯದರ್ಶಿ ಶ್ರೀ ರಂದೀಪ್ ಡಿ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಬಿ. ಫೌಜಿಯಾ ತರನ್ನುಮ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದರು.
ಈ ವೇಳೆ ಘನತ್ಯಾಜ್ಯ ನಿರ್ವಹಣೆ ನಿಯಮಗಳು–2026ರ ಪರಿಣಾಮಕಾರಿ ಜಾರಿಗೆ ಸಂಬಂಧಿಸಿದ ಮಾರ್ಗಸೂಚಿಗಳು, ಗ್ರಾಮ ಪಂಚಾಯಿತಿಗಳ ಪಾತ್ರ, ತ್ಯಾಜ್ಯ ವಿಂಗಡಣೆ, ಸಂಗ್ರಹಣೆ, ಸಂಸ್ಕರಣೆ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸಲು ವಿವಿಧ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕಾರ್ಯಾಗಾರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪಕಾರ್ಯದರ್ಶಿ (ಅಭಿವೃದ್ಧಿ) ಎಸ್.ಸಿ. ಮಹೇಶ್, ಉಪಕಾರ್ಯದರ್ಶಿ (ಆಡಳಿತ) ಜಾಫರ್ಶರೀಫ್ ಸುತಾರ, ಯೋಜನಾಧಿಕಾರಿ ಸ್ನೇಹಲತಾ, ರಾಜ್ಯದ ವಿವಿಧ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು , ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಎಸ್ಬಿಎಂಜಿ ಸಮಾಲೋಚಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಗ್ರಾಮೀಣ ಕರ್ನಾಟಕವನ್ನು ಸ್ವಚ್ಛ, ಸುಂದರ ಮತ್ತು ಪರಿಸರ ಸ್ನೇಹಿ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು–2026ರ ಪರಿಣಾಮಕಾರಿ ಅನುಷ್ಠಾನ ಅತ್ಯಂತ ಮಹತ್ವದ್ದಾಗಿದೆ ಎಂದು ಕಾರ್ಯಾಗಾರದಲ್ಲಿ ಒತ್ತಿ ಹೇಳಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.